ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಸುಧಾಕರ್‌ಗೆ ಸಚಿವ ಸ್ಥಾನ ಖಚಿತ, ಬೆಂಗಳೂರಿನತ್ತ ಬೆಂಬಲಿಗರು

Last Updated 4 ಆಗಸ್ಟ್ 2021, 4:27 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಶಾಸಕ ಡಾ.ಕೆ.ಸುಧಾಕರ್ ಅವರಿಗೆ ಸಚಿವ ಸ್ಥಾನ ಖಚಿತವಾಗಿದೆ ಎಂದು ಅವರ ಬೆಂಬಲಿಗರು ಬೆಂಗಳೂರಿನತ್ತ ತೆರಳಲು ಸಿದ್ಥವಾಗಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮಕ್ಕೆ ತೆರಳಲು ನಗರಸಭೆ ಅಧ್ಯಕ್ಷ, ಸದಸ್ಯರು ಹಾಗೂ‌ ಮುಖಂಡರು ಮುಂದಾಗಿದ್ದಾರೆ.

ಸುಧಾಕರ್ ಅವರಿಗೆ ಸಚಿವ ಸ್ಥಾನ ದೊರೆಯಲಿದೆ. 10.30ಕ್ಕೆ ನಗರದ ಶನೈಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ ಬೆಂಗಳೂರಿಗೆ ತೆರಳುತ್ತೇವೆ ಎಂದು ನಗರಸಭೆ ಅಧ್ಯಕ್ಷ ಆನಂದರೆಡ್ಡಿ ಬಾಬು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಪ್ರತಿನಿಧಿಸುತ್ತಿರುವ ಡಾ.ಕೆ.ಸುಧಾಕರ್ ಅವರಿಗೆ 48 ವರ್ಷ. ಒಕ್ಕಲಿಗ ಸಮುದಾಯದ ಅವರು ಎಂಬಿಬಿಎಸ್ ಶಿಕ್ಷಣ ವ್ಯಾಸಂಗ ಮಾಡಿದ್ದಾರೆ. ಅವರು 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದರು.

2013, 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸುಧಾಕರ್ ‌ ಗೆಲುವು ಸಾಧಿಸಿದರು. ಎಚ್.ಡಿ. ಕುಮಾರ ಸ್ವಾಮಿ ನೇತೃತ್ವದ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿ ಆಗಿದ್ದರು.

ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣರಾದ 17 ಶಾಸಕರಲ್ಲಿ ಸುಧಾಕರ್ ಸಹ ಒಬ್ಬರು. ಬಿಜೆಪಿ ಸೇರ್ಪಡೆಯಾಗಿ 2019ರ ಡಿ.5ರಂದು ನಡೆದ ಉಪಚುನಾವಣೆಯಲ್ಲಿ ಮತ್ತೊಮ್ಮೆ ಗೆಲುವು ಸಾಧಿಸಿದರು. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಮೊದಲ ಬಾರಿಗೆ ಸಚಿವರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT