ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಹೊಸ ರೈಲ್ವೆ ಯೋಜನೆಗಳು ಹಾಗೂ ಜಾರಿಯಲ್ಲಿರುವ ಕಾಮಗಾರಿಗಳ ಬಗ್ಗೆ ಚರ್ಚಿಸಲು ಬೆಂಗಳೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿಯಲ್ಲಿ ಶನಿವಾರ ಸಭೆ ನಡೆಯಿತು.

ಬೆಂಗಳೂರು ಉಪನಗರ ರೈಲು ಯೋಜನೆ, ಹೊಸ ರೈಲು ಮಾರ್ಗಗಳು, ಡಬ್ಲಿಂಗ್, ವಿದ್ಯುದ್ಧೀಕರಣ, ಲೆವೆಲ್ ಕ್ರಾಸಿಂಗ್ನಲ್ಲಿ ಮೇಲ್ಸೇತುವೆ, ರೈಲು ನಿಲುಗಡೆ, ರೈಲು ನಿಲ್ದಾಣಗಳ ಅಭಿವೃದ್ಧಿ ಸೇರಿದಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ 60ಕ್ಕೂ ಅಧಿಕ ರೈಲ್ವೆ ಯೋಜನೆಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು.

ಸಂಸದ ಡಾ.ಕೆ.ಸುಧಾಕರ್ ಮಾತನಾಡಿ, ಕೆಲವು ಯೋಜನೆಗಳಿಗೆ ರಾಜ್ಯ ಸರ್ಕಾರದ ಸಹಕಾರ ಅಗತ್ಯ. ಈ ಕುರಿತು ರಾಜ್ಯ ಸರ್ಕಾರದ ಅಧಿಕಾರಿಗಳು ಹಾಗೂ ಸಚಿವರ ಜೊತೆ ಮಾತುಕತೆ ನಡೆಸಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದರು, ಅಭಿವೃದ್ಧಿ ಎಂಜಿನ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಡೆಗೆ ಸಾಗುತ್ತಿದೆ. ಇದು ಹೊಸ ಬೆಂಗಳೂರಾಗಿ ಪರಿವರ್ತನೆ ಆಗುತ್ತಿದೆ. ವಿಮಾನ ನಿಲ್ದಾಣಕ್ಕೆ ಉಪನಗರ ರೈಲು ಸಂಪರ್ಕ, ಚಿಕ್ಕಬಳ್ಳಾಪುರ-ಪುಟ್ಟಪರ್ತಿ, ಚಿಕ್ಕಬಳ್ಳಾಪುರ-ಗೌರಿಬಿದನೂರು, ಚಿಕ್ಕಬಳ್ಳಾಪುರ-ದೊಡ್ಡಬಳ್ಳಾಪುರ, ದೇವನಹಳ್ಳಿ-ದೊಡ್ಡಬಳ್ಳಾಪುರ-ಯಲಹಂಕ ಸೇರಿದಂತೆ 60 ಕ್ಕೂ ಅಧಿಕ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಕೆಲವು ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಇನ್ನೂ ಕೆಲ ಯೋಜನೆಗಳಿಗೆ ರಾಜ್ಯ ಸರ್ಕಾರದ ಸಹಕಾರ ಬೇಕಿದೆ. ಅದಕ್ಕಾಗಿ ಸಂಬಂಧಪಟ್ಟ ಅಧಿಕಾರಿ ಹಾಗೂ ಸಚಿವರೊಂದಿಗೆ ಚರ್ಚಿಸಲಿದ್ದೇನೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ವರ್ಷಗಳಲ್ಲಿ ರೈಲ್ವೆ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದ್ದಾರೆ. ಹಿಂದಿನ ಸರ್ಕಾರಗಳು ನೀಡುತ್ತಿದ್ದ ಅನುದಾನಕ್ಕಿಂತ ಏಳು ಪಟ್ಟು ಅಧಿಕ ಅನುದಾನವನ್ನು ಎನ್ಡಿಎ ಸರ್ಕಾರ ಕರ್ನಾಟಕದ ರೈಲ್ವೆ ಯೋಜನೆಗಳಿಗೆ ನೀಡಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ರೈಲ್ವೆ ವಲಯಕ್ಕೆ ಯಾರೂ ಹೆಚ್ಚು ಆದ್ಯತೆ ನೀಡಿರಲಿಲ್ಲ. ನಾನು ಈ ಕುರಿತು ಹೆಚ್ಚು ಗಮನಹರಿಸಿದ್ದೇನೆ ಎಂದರು.

ಸಭೆಯಲ್ಲಿ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೇಶ್ ಮೋಹನ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಭಾಸ್ಕರ್, ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

‘ಚನ್ನಪಟ್ಟಣ; ಭಾವನಾತ್ಮಕ ವಿಚಾರ’

ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲ್ಲುತ್ತಾರೆ. ಜೆಡಿಎಸ್ ಜೊತೆಗೆ ಬಿಜೆಪಿಯ ಪಾರಂಪರಿಕ ಮತಗಳಿವೆ. ನಿಷ್ಠಾವಂತ ಕಾರ್ಯಕರ್ತರು ನೂರಕ್ಕೆ ನೂರರಷ್ಟು ಒಮ್ಮತದಿಂದ ಕೆಲಸ ಮಾಡಲಿದ್ದಾರೆ ಎಂದು ಡಾ.ಕೆ.ಸುಧಾಕರ್ ತಿಳಿಸಿದರು.

ಎಚ್.ಡಿ.ದೇವೇಗೌಡ ಎಚ್.ಡಿ.ಕುಮಾರಸ್ವಾಮಿ ಆ ಭಾಗಕ್ಕೆ ಉತ್ತಮ ಯೋಜನೆಗಳನ್ನು ನೀಡಿದ್ದಾರೆ. ಅಲ್ಲಿ ಅನುಕಂಪದ ಅಲೆ ಕೂಡ ಇದೆ. ದೇವೇಗೌಡರಿಗೆ ನೋವು ಕೊಡಲು ಜನರು ಕೂಡ ತಯಾರಿಲ್ಲ. ಇಲ್ಲಿ ಭಾವನಾತ್ಮಕ ವಿಚಾರವೂ ಅಡಗಿದೆ. ಆದ್ದರಿಂದ ನಿಖಿಲ್ ಗೆಲ್ಲುವುದರಲ್ಲಿ ಎಳ್ಳಷ್ಟೂ ಸಂಶಯವಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.