ಸೋಮವಾರ, ಏಪ್ರಿಲ್ 12, 2021
30 °C

ಚಿಕ್ಕಬಳ್ಳಾಪುರ: ಕ್ವಾರಿ ಹೊಂಡದಲ್ಲಿ ಮುಳುಗಿ ತಾಯಿ, ಮಗಳು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ತಾಲ್ಲೂಕಿನ ಹಾರೋಬಂಡೆ ಬಳಿಯ ಕಲ್ಲು ಕ್ವಾರಿಯ ಹೊಂಡದಲ್ಲಿ ಮುಳಗಿ ಮಂಗಳವಾರ ತಾಯಿ, ಮಗಳು ಮೃತಪಟ್ಟಿದ್ದಾರೆ. ಪೂಜಾ (30), ಮಂಜುಳಾ (8) ಮೃತರು. 

10 ವರ್ಷಗಳ ಹಿಂದೆ ಇಲ್ಲಿ ಕಲ್ಲು ಕ್ವಾರಿ ನಡೆಯುತ್ತಿತ್ತು. ಕ್ವಾರಿಯಿಂದ ನಿರ್ಮಾಣವಾದ ಗುಂಡಿಯಲ್ಲಿ ಮಳೆ ನೀರು ಸಂಗ್ರಹವಾಗಿತ್ತು. ಪೂಜಾ ಅವರು ಬಟ್ಟೆ ತೊಳೆಯಲು ತನ್ನ ಇಬ್ಬರು ಮಕ್ಕಳ ಜತೆ ಈ ಹೊಂಡದ ಬಳಿ ತೆರಳಿದ್ದರು. 

ಮಂಜುಳಾ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾಳೆ. ಆಕೆಯನ್ನು ರಕ್ಷಿಸಲು ಪೂಜಾ ಸಹ ಮುಂದಾಗಿದ್ದು ಅವರೂ ಮುಳುಗಿದ್ದಾರೆ ಎಂದು ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು