ಮುದ್ದೇನಹಳ್ಳಿ (ಚಿಕ್ಕಬಳ್ಳಾಪುರ): ಮುದ್ದೇನಹಳ್ಳಿಯ ಅರಿವು ಕೇಂದ್ರ ಗ್ರಂಥಾಲಯದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪವು ಶನಿವಾರ ನಡೆಯಿತು.

ಶಿಬಿರದಲ್ಲಿ ನಡೆದ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.

ಜಿಲ್ಲಾ ಗ್ರಂಥಪಾಲರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಶ್ವತ್ಥ್ ಮಾತನಾಡಿ, ನಗರ ಭಾಗದಲ್ಲಿರುವ ಪೋಷಕರು ಖಾಸಗಿ ಬೇಸಿಗೆ ಶಿಬಿರಗಳಿಗೆ ಅವರ ಮಕ್ಕಳನ್ನು ಕಳುಹಿಸುವರು. ಆದರೆ ಗ್ರಾಮೀಣ ಮಕ್ಕಳಿಗೆ ಈ ಅವಕಾಶ ಇರುವುದಿಲ್ಲ. ಆದ್ದರಿಂದ ಗ್ರಾಮೀಣ ಮಕ್ಕಳಿಗೂ ಬೇಸಿಗೆ ಶಿಬಿರದ ಸದುಪಯೋಗ ಆಗಬೇಕು ಎಂದು ಎಲ್ಲಾ ಅರಿವು ಕೇಂದ್ರ ಗ್ರಂಥಾಲಯಗಳಲ್ಲಿ ಬೇಸಿಗೆ ಶಿಬಿರಗಳನ್ನು ಆಯೋಜಿಸಲಾಗಿತ್ತು ಎಂದರು.

ಹಲವು ವಿಚಾರವಂತರನ್ನು ಶಿಬಿರಕ್ಕೆ ಕರೆಯಿಸಿ ಮಕ್ಕಳಿಗೆ ವಿವಿಧ ವಿಚಾರಗಳನ್ನು ತಿಳಿಸಲಾಗಿದೆ. ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಲಾಗಿದೆ. ಮಕ್ಕಳ ಪ್ರತಿಭೆಗಳಿಗೆ ತಕ್ಕಂತೆ ಬಹುಮಾನಗಳನ್ನು ನೀಡಲಾಗಿದೆ ಎಂದು ಹೇಳಿದರು.

ಅಧ್ಯಕ್ಷತೆವಹಿಸಿದ್ದ ಪಿಡಿಒ ಎಂ.ಎನ್.ತಿಪ್ಪಯ್ಯ, ಆರೋಗ್ಯ, ಯೋಗ, ಧ್ಯಾನ, ಆತ್ಮರಕ್ಷಣೆಯ ಕಲೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಶಿಬಿರದಲ್ಲಿ ಮಕ್ಕಳಿಗೆ ಮಾಹಿತಿ ನೀಡಲಾಗಿದೆ. ಜನಪದ ಕಲಾವಿದರು, ನಿವೃತ್ತ ಮುಖ್ಯ ಶಿಕ್ಷಕರು, ಆರೋಗ್ಯಾಧಿಕಾರಿ ಹೀಗೆ ಬೇರೆ ಬೇರೆ ಕ್ಷೇತ್ರದ ವ್ಯಕ್ತಿಗಳು ಮಕ್ಕಳಿಗೆ ವಿಷಯಗಳು ತಿಳಿಸಿದ್ದಾರೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಶಿವಕುಮಾರ್, ವೆಂಕಟರಾಜು ಎಂ.ಎನ್., ಮಲೆಪ್ಪನಹಳ್ಳಿ ಮುನಿರಾಜು, ರತ್ನಮ್ಮ, ಸುಜಾತ, ವೆಂಕಟ್ ನಾರಾಯಣ್, ನವೀನ್ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-16-1042954171

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.