ಚಿಕ್ಕಬಳ್ಳಾಪುರ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಬುಧವಾರ ನಗರದ ಬಿಜೆಪಿ ಜಿಲ್ಲಾ ಕಚೇರಿ ಎದುರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.

ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪರೀಕ್ಷೆ ಆರಂಭಕ್ಕೂ ಮುನ್ನವೇ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದು ಕೇಂದ್ರ ಸರ್ಕಾರದ ವೈಫಲ್ಯ. ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿದೆ. ನೀಟ್ ಪರೀಕ್ಷೆ ಅತ್ಯಂತ ಕಷ್ಟವಾದುದು. ಸಾಕಷ್ಟು ಸಿದ್ಧತೆ ನಡೆಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ. ಇಂತಹ ಪ್ರಶ್ನೆಪತ್ರಿಕೆ ಸೋರಿಕೆ ಘಟನೆಗಳು ಅವರಿಗೆ ದೊಡ್ಡ ಆಘಾತ ಉಂಟುಮಾಡುತ್ತವೆ ಎಂದು ಯುವ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆಗಳಲ್ಲಿ ಚಾಣಾಕ್ಷತನ ತೋರಿಸುವ ಬಿಜೆಪಿ, ಪ್ರಶ್ನೆಪತ್ರಿಕೆ ಸೋರಿಕೆ ತಪ್ಪಿಸಲು ಆ ಚಾಣಾಕ್ಷತನವನ್ನು ತೋರಿಸಲು ವಿಫಲವಾಗಿದೆ. ಕೇಂದ್ರ ಸರಕಾರ ತನ್ನ ತಪ್ಪನ್ನು ಮುಚ್ಚಿಹಾಕುವ ಉದ್ದೇಶದಿಂದ ನೀಟ್ ಪರೀಕ್ಷೆಯನ್ನು ರದ್ದುಪಡಿಸಿದೆ ಎಂದು ಕಿಡಿಕಾರಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-16-890446556

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.