ಗೌರಿಬಿದನೂರು: ಕೃಷಿ ಇಲಾಖೆಯಿಂದ ತಾಲ್ಲೂಕಿನ ತೊಂಡೇಬಾವಿ ಹೋಬಳಿಯ ಪಿಂಜಾರಹಳ್ಳಿ ಗ್ರಾಮದ ರೈತ ಚನ್ನಪ್ಪ ಅವರ ಜಮೀನಿನಲ್ಲಿ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ತೊಗರಿ ಬೆಳೆ ಕ್ಷೇತ್ರೋತ್ಸವ ಶನಿವಾರ ನಡೆಯಿತು.

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಪಾಪಿರೆಡ್ಡಿ ಮಾತನಾಡಿ, ತೊಗರಿ ಬೆಳೆಯಲ್ಲಿ ಸಮಗ್ರ ಪೀಡೆ ನಿರ್ವಹಣೆ ಮತ್ತು ಸಮಗ್ರ ಪೋಷಕಾಂಶಗಳ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.

ರೈತರು ಒಂದೇ ಬೆಳೆಯನ್ನು ಬೆಳೆಯುವ ಬದಲಾಗಿ ಸಮಗ್ರ ಕೃಷಿ ಪದ್ಧತಿ ಅಳವಡಿಸಬೇಕೆಂದು ಸಲಹೆ ನೀಡಿದರು.

ಸಹಾಯಕ ಕೃಷಿ ನಿರ್ದೇಶಕ ಮೋಹನ್ ಮಾತನಾಡಿ, ತೊಗರಿ ಬೆಳೆಯ ತಳಿಗಳಾದ ಬಿ.ಆರ್.ಜಿ 1, ಬಿ.ಆರ್.ಜಿ-2, ಬಿ.ಆರ್.ಜಿ 3, ಬಿ.ಆರ್.ಜಿ 4, ಬಿ.ಆರ್.ಜಿ 5 ಮತ್ತು ಎನ್.ಟಿ.ಎಲ್ 2 ತಳಿಗಳ ಬಗ್ಗೆ ಮಾಹಿತಿ ನೀಡಿದರು.

ರೈತ ಬೆಳಚಿಕ್ಕನಹಳ್ಳಿ ಗ್ರಾಮದ ಶ್ರೀರಾಮರೆಡ್ಡಿ ಮಾತನಾಡಿ, ರೈತರು ರಸಗೊಬ್ಬರಗಳ ಜೊತೆಗೆ ಸಾವಯವ ಗೊಬ್ಬರ ಬಳಸಬೇಕು. ಸರ್ಕಾರದಿಂದ ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ರೈತರು ಕಚೇರಿಗಳಿಗೆ ಭೇಟಿ ನೀಡಿ ತಮಗೆ ಅವಶ್ಯವಿರುವ ಸವಲತ್ತು ಪಡೆದುಕೊಳ್ಳಬೇಕು ಎಂದರು.

ಆತ್ಮ ಯೋಜನೆಯ ಉಪಸಂಯೋಜನಾಧಿಕಾರಿ ಸತೀಶ್ ಮಾತನಾಡಿದರು. ಕೃಷಿ ಅಧಿಕಾರಿ ಭವ್ಯ, ಭೀಮೇಗೌಡ, ಜಗದಾಂಬ, ನಯಾಜ್ ಖಾನ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.