ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಒಕ್ಕಲಿಗರ ಸಂಘದಿಂದ ನಗರದ ಒಕ್ಕಲಿಗರ ಕಲ್ಯಾಣ ಮಂಟಪದ ಬಳಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣವನ್ನು ಬುಧವಾರ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು.

ಒಕ್ಕಲಿಗ ಸಮಾಜದ ಒಗ್ಗಟ್ಟಿಗೆ ಸಾಕ್ಷಿಯಾದ ಈ ಕಾರ್ಯಕ್ರಮದಲ್ಲಿ ರಾಜಕೀಯ ನಾಯಕರು ಪಕ್ಷಾತೀತವಾಗಿ ವೇದಿಕೆ ಹಂಚಿಕೊಂಡಿದ್ದರು. ರಾಜಕೀಯ ಎದುರಾಳಿಗಳಾದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಸಂಸದ ಡಾ.ಕೆ.ಸುಧಾಕರ್ ಬಹಳ ದಿನಗಳ ನಂತರ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.

ಸಚಿವ ಡಾ. ಎಂ.ಸಿ. ಸುಧಾಕರ್ ಮಾತನಾಡಿ, ‘ನಮ್ಮ ಸಮಾಜದ ಹಿರಿಯರ ದೂರದೃಷ್ಟಿಯ ಫಲದಿಂದ ಚಿಕ್ಕಬಳ್ಳಾಪುರ ನಗರದ ಪ್ರಮುಖ ಸ್ಥಳದಲ್ಲಿ ಈ ನಿವೇಶನ ದೊರೆತಿದೆ. ಭವ್ಯ ಭವನ ಮತ್ತು ವಾಣಿಜ್ಯ ಸಂಕೀರ್ಣ ನಿರ್ಮಾಣವಾಗಿದೆ’ ಎಂದರು.

‘ಒಕ್ಕಲಿಗರು ಒಕ್ಕಲುತನ ಮಾಡಿಕೊಂಡು ಜೀವನ ನಡೆಸುತ್ತಿರುವ ಸಮುದಾಯ. ಶೈಕ್ಷಣಿಕ ಪ್ರಗತಿ ಸಾಧಿಸುವ ಜೊತೆಗೆ ವ್ಯಾಪಾರ ಉದ್ದಿಮೆಗಳಲ್ಲಿಯೂ ತೊಡಗಿಸಿಕೊಂಡಿದ್ದೇವೆ. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ಸಮುದಾಯವರಿಗೆ ಒಳ್ಳೆಯದಾಗಬೇಕು’ ಎಂದು ಹೇಳಿದರು.

‘ನಮ್ಮ ಸಮುದಾಯದ ಆದಿಚುಂಚನಗಿರಿ ಮಠವು ಆರೋಗ್ಯ, ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದೆ. ಇತರೆ ಸಮುದಾಯಗಳಿಗೂ ನೆರವಾಗುತ್ತಿದೆ’ ಎಂದರು.

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತ ಸಂಪತ್ತನ್ನು ಉಳಿಸಿ ಬೆಳೆಸಿಕೊಂಡು ಬರುತ್ತಿರುವ ಸಂಘಗಳ ಪೈಕಿ ಚಿಕ್ಕಬಳ್ಳಾಪುರ ಮತ್ತು ಚಿಕ್ಕಮಗಳೂರು ಸಂಘಗಳು ಮೊದಲ ಸಾಲಿನಲ್ಲಿ ಇವೆ ಎಂದರು.

ಒಕ್ಕಲಿಗರ ಸಂಘ ಇಷ್ಟು ಗಟ್ಟಿಯಾಗಿ ಉಳಿದು ಬೆಳೆಯಲು ಕೆ.ಬಿ.ಪಿಳ್ಳಪ್ಪ ಮತ್ತು ಡಿ ಹೊಸೂರು ಚಡ್ಡಿ ಪಿಳ್ಳಪ್ಪ ಕಾರಣ. 80 ವರ್ಷ ಇತಿಹಾಸವಿರುವ ಒಕ್ಕಲಿಗರ ಸಂಘದ ಕಲ್ಯಾಣ ಮಂಟಪ ಮತ್ತು ಈ ವಾಣಿಜ್ಯ ಕಟ್ಟಡದ ಜಾಗವನ್ನು ದಾನವಾಗಿ ನೀಡಿ ಉಳಿಸಿಕೊಂಡು ಬಂದಿರುವ ಕೀರ್ತಿ ನಾರಾಯಣಪ್ಪ ಮತ್ತು ಪೊಲೀಸ್ ದೊಡ್ಡಪ್ಪ ಅವರದ್ದು ಎಂದರು.

ಮಣ್ಣಿನ ವಾಸನೆ ಜೊತೆ ಬೆಳೆಯುತ್ತಿರುವ ಸಮುದಾಯಕ್ಕೆ ಕ್ಷಮಿಸುವ ಗುಣವೂ ಇದೆ. ಮತ್ತೊಬ್ಬರಿಗೆ ಅನ್ನ ನೀಡಿ ಕಾಪಾಡುವ ಗುಣ ಇದೆ. ಇಂತಹ ಸಮುದಾಯದಲ್ಲಿ ಹುಟ್ಟಿ ರಾಜಕಾರಣಿಗಳಾಗಿ ಜಿಲ್ಲೆಯನ್ನು ಆಳುತ್ತಿರುವ ಡಾ.ಎಂ.ಸಿ.ಸುಧಾಕರ್ ಮತ್ತು ಡಾ.ಕೆ.ಸುಧಾಕರ್ ಇಡೀ ಜಿಲ್ಲೆಗೆ ಬೆಳಕು ನೀಡುತಿದ್ದಾರೆ ಎಂದು ಪ್ರಶಂಸಿಸಿದರು.

ಮಂಗಳಾನಂದನಾಥ ಸ್ವಾಮೀಜಿ, ಚಿಕ್ಕಬಳ್ಳಾಪುರ ಒಕ್ಕಲಿಗರ ಸಂಘದ ಅಧ್ಯಕ್ಷ ಕೇಶವರೆಡ್ಡಿ, ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುನಿಯಪ್ಪ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಯಲುವಳ್ಳಿ ರಮೇಶ್, ನಿರ್ದೇಶಕ ಡಾ.ರಮೇಶ್, ಕೆ.ವಿ.ನಾಗರಾಜ್ ಹಾಗೂ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-18-777773707

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.