ಚಿಕ್ಕಬಳ್ಳಾಪುರ: ತೆರೆದ ಕೊಳವೆ ಬಾವಿಗಳಿಗೆ ಯಾವುದೇ ಮಕ್ಕಳು ಹಾಗೂ ವ್ಯಕ್ತಿಗಳು ಬಿದ್ದು ಪ್ರಾಣ ಹಾನಿ ಆಗುವ ಪ್ರಸಂಗಗಳು ಜಿಲ್ಲೆಯಲ್ಲಿ ಜರುಗಬಾರದು. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿಗಾ ವಹಿಸಿ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಎಚ್ಚರಿಕೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಮುಂಗಾರು ಮಳೆ ಬರುವವರೆಗೆ ಮುಂದಿನ 3ರಿಂದ 4 ತಿಂಗಳು ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಜಲ ಜೀವನ್ ಮಿಷನ್ ಯೋಜನೆಯ ಅನುಷ್ಠಾನದ ಕಾರ್ಯಪಾಲಕ ಎಂಜಿನಿಯರ್ಗಳು ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಜಲಜೀವನ್ ಮಿಷನ್ ಅನುಷ್ಠಾನದ ಎಂಜಿನಿಯರ್ಗಳು ಯೋಜನೆಯನ್ನು ಸಮಪರ್ಕವಾಗಿ ಅನುಷ್ಠಾನಗೊಳಿಸಬೇಕು. ಎಲ್ಲ ಮೂಲ ಸೌಕರ್ಯ ಕಲ್ಪಿಸಿದ ಮೇಲೆ ಕೊಳವೆ ಬಾವಿಯಿಂದ ನೀರು ಹೊರತೆಗೆದ ನಂತರವೇ ಗ್ರಾಮ ಪಂಚಾಯಿತಿಗಳ ಸುಪರ್ದಿಗೆ ನೀಡಬೇಕು ಎಂದರು.

ಜಲಜೀವನ್ ಯೋಜನೆಯಡಿ ಅನುಮೋದನೆ ಆಗಿರುವ ಕೊಳವೆ ಬಾವಿಗಳನ್ನು ಕೊರೆಸಿ ನೀರು ಪೂರೈಸಿದರೆ ಸಮಸ್ಯೆಯೇ ಉದ್ಬವವಾಗುವುದಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಯೋಜನಾ ಎಂಜಿನಿಯರ್ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕುಡಿಯುವ ನೀರಿನ ಉದ್ದೇಶಕ್ಕೆ ಹಾಗೂ ಇತರ ಯಾವುದೇ ಉದ್ದೇಶಕ್ಕಾಗಿ ಕೊರೆದ ಕೊಳವೆ ಬಾವಿಗಳಲ್ಲಿ ನೀರು ಲಭ್ಯವಾದರೆ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಿ ಮೋಟರ್ ಪಂಪ್ ಅಳವಡಿಸಿ ನೀರು ಪೂರೈಸುವಂತೆ ಸಕಲ ವ್ಯವಸ್ಥೆಗಳನ್ನು ಮಾಡಬೇಕು ಎಂದು ಸೂಚಿಸಿದರು.

ಒಂದು ವೇಳೆ ನೀರು ದೊರಕದೆ ಇರುವ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚುವ ಕೆಲಸವನ್ನು ಸಂಬಂಧಪಟ್ಟವರು ಕೂಡಲೆ ಮಾಡಬೇಕು. ಕೊಳವೆ ಬಾವಿ ಕೊರೆದು ನೀರು ದೊರಕಿದರೂ ವಿದ್ಯುತ್ ಸಂಪರ್ಕ ಅಥವಾ ಇತರ ಮೂಲ ಸೌಕರ್ಯ ಕಲ್ಪಿಸಲು ವಿಳಂಬ ಮಾಡಿದರೆ, ಅಲ್ಲಿ ಅವಘಡಗಳು ಸಂಭವಿಸಿದರೆ ಸಹಿಸುವುದಿಲ್ಲ. ಎಂಜಿನಿಯರ್ಗಳು ಹಾಗೂ ಸ್ಥಳೀಯ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ನಿರ್ದೇಶಕ ಮಂಜುನಾಥ, ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ನಗರಾಡಳಿತ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-16-1768234744

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.