ಚಿಕ್ಕಬಳ್ಳಾಪುರ: ನಗರದ ಹೊರ ವಲಯದ ಅಣಕನೂರು ಬಳಿಯ ಜಿಲ್ಲಾ ಕಾರಾಗೃಹಕ್ಕೆ ಜಿಲ್ಲಾಧಿಕಾರಿ ಜಿ.ಪ್ರಭು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಹಾಗೂ ಅಧಿಕಾರಿಗಳು ಭೇಟಿ ನೀಡಿ ಕಾರಾಗೃಹದ ಭದ್ರತೆ ಬಗ್ಗೆ ಈಚೆಗೆ ಪರಿಶೀಲಿಸಿದರು.

ರಾಜ್ಯದ ಹಲವು ಕಾರಾಗೃಹಗಳಲ್ಲಿ ಬಂಧಿತರು ಅಕ್ರಮವಾಗಿ ಮೊಬೈಲ್ ಬಳಕೆ ಹಾಗೂ ಗಾಂಜಾ ಪೂರೈಕೆ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕಾರಾಗೃಹದಲ್ಲಿರುವ ಬಂಧಿಗಳ ಸಂಖ್ಯೆ, ಅವರಿಗೆ ದಿನನಿತ್ಯ ನೀಡುತ್ತಿರುವ ಊಟದ ಮೆನು, ಊಟಕ್ಕೆ ಬಳಸುತ್ತಿರುವ ಆಹಾರ ಪದಾರ್ಥಗಳ ಗುಣಮಟ್ಟ, ಕಾರಾಗೃಹಕ್ಕೆ ಬರುವ ಸಂದರ್ಶಕರ ಮಾಹಿತಿಯ ದಾಖಲಾತಿ ಪುಸ್ತಕಗಳನ್ನು ಪರಿಶೀಲಿಸಿದರು.

3 ತಿಂಗಳಿಗೊಮ್ಮೆ ಕಾರಾಗೃಹ ಸಂದರ್ಶಕ ಮಂಡಳಿ ಸಭೆ ನಡೆಸಿ, ಸದರಿ ಸಭೆಯ ನಡವಳಿಗಳನ್ನು ಇಲಾಖಾ ಮುಖ್ಯಸ್ಥರಿಗೆ ಒಪ್ಪಿಸಬೇಕು ಎಂದು ಅಧಿಕಾರಿಗಳು ತಿಳಿಸಿದರು.

ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕಾರಾಗೃಹ ಸಂದರ್ಶಕ ಮಂಡಳಿ ಸಭೆಯನ್ನು ನಡೆಸಿ, ಕಾರಾಗೃಹಗಳ ದೈನಂದಿನ ಆಡಳಿತ ಹಾಗೂ ಮೂಲ ಸೌಕರ್ಯಗಳ ಕುರಿತು ಚರ್ಚಿಸಿದರು.

ಡಿಎಚ್ಒ ಡಾ.ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪ ಸೇರಿದಂತೆ ಹಲವು ಇಲಾಖೆಗಳ ಹಿರಿಯ ಅಧಿಕಾರಿಗಳ ತಂಡ ಕಾರಾಗೃಹಕ್ಕೆ ಭೇಟಿ ನೀಡಿ ಅಲ್ಲಿನ ದೈನಂದಿನ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ ಕಲೆ ಹಾಕಿದರು.

ಜಿಲ್ಲಾ ಕಾರಾಗೃಹ ಕಾರ್ಯಾಲಯದ ಅಧೀಕ್ಷಕ ವಿಜಯಕುಮಾರ್ ಹಾಗೂ ಇತರೆ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-16-1445250787

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.