ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಶೇ 90.24 ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 9ನೇ ಸ್ಥಾನಕ್ಕೆ ಭಾಜನವಾಗಿದೆ.

ಕಳೆದ ವರ್ಷ ಶೇ 75.80 ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 11ನೇ ಸ್ಥಾನಕ್ಕೆ ಭಾಜನವಾಗಿತ್ತು. ಈ ಬಾರಿ ಜಿಲ್ಲೆಯ ವಿದ್ಯಾರ್ಥಿಗಳ ಸಾಧನೆ ಉತ್ತಮವಾಗಿದೆ.

ಜಿಲ್ಲೆಯಲ್ಲಿ ಒಟ್ಟು 11,904 ವಿದ್ಯಾರ್ಥಿಗಳು ಮೊದಲ ಬಾರಿಗೆ ಪರೀಕ್ಷೆ ಬರೆದಿದ್ದರು. ಇವರಲ್ಲಿ 10,742 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ 90.24 ರಷ್ಟು ಫಲಿತಾಂಶ ಜಿಲ್ಲೆಗೆ ದೊರೆತಿದೆ.

ವಿಭಾಗಾವಾರು ಫಲಿತಾಂಶ: ಕಲಾ ವಿಭಾಗದಲ್ಲಿ ಮೊದಲ ಬಾರಿಗೆ 889 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 704 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ 79.19ರಷ್ಟು ಫಲಿತಾಂಶ ಬಂದಿದೆ. ವಾಣಿಜ್ಯ ವಿಭಾಗದಲ್ಲಿ 4,828 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 4,307 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ 89.21 ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ 6,187 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 5,731 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ 92.63ರಷ್ಟು ಫಲಿತಾಂಶ ಬಂದಿದೆ.

ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ: ಜಿಲ್ಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ನಗರ ಪ್ರದೇಶದ 7,378 ವಿದ್ಯಾರ್ಥಿಗಳ ಪೈಕಿ 6,530 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ 88.51ರಷ್ಟು ಫಲಿತಾಂಶ ಪಡೆದಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ಬರೆದ 4,526 ವಿದ್ಯಾರ್ಥಿಗಳ ಪೈಕಿ 4,212 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ 93.06ರಷ್ಟು ಫಲಿತಾಂಶ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಭುವನ ಪ್ರಥಮ: ಚಿಕ್ಕಬಳ್ಳಾಪುರದ ಅಗಲಗುರ್ಕಿಯ ಬಿ.ಜಿ.ಎಸ್ ಪಿ.ಯು ಕಾಲೇಜಿನ ವಾಣಿಜ್ಯ ವಿಭಾಗ ಭುವನ ಸಿ.ಎ. 600ಕ್ಕೆ 596 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಸಮೀಕ್ಷ ಎನ್ 600ಕ್ಕೆ 594 ಅಂಕಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಬಿಜಿಎಸ್ ಪಿಯು ಕಾಲೇಜು ಶೇ 100 ಫಲಿತಾಂಶ ಪಡೆದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-16-1194777055

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.