ಚಿಕ್ಕಬಳ್ಳಾಪುರ: ಕೇಂದ್ರದಲ್ಲಿ ಯುಪಿಎ ಅಧಿಕಾರದಲ್ಲಿ ಇದ್ದ ವೇಳೆ ಎಷ್ಟು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ರಾಜ್ಯದಲ್ಲಿ ಕೆಪಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲವೇ? ಎಲ್ಲದರಲ್ಲಿಯೂ ರಾಜಕೀಯ ಹುಡುಕುವ ಕಾಂಗ್ರೆಸ್ನವರಿಗೆ ನಾಚಿಕೆ ಆಗಬೇಕು ಎಂದು ಸಂಸದ ಡಾ.ಕೆ.ಸುಧಾಕರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಎಷ್ಟು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಕಾಂಗ್ರೆಸ್ನವರು ಕುರುಡರಿದ್ದಾರಾ. ಇದೇ ಮೊದಲ ಬಾರಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವುದೇ? ಈ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದರು.

‘ನಮ್ಮ ಕಚೇರಿ, ಮನೆಗಳ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಇವರಿಗೆ ನಾಚಿಕೆ ಮಾನ ಮರ್ಯಾದೆ ಇದೆಯಾ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವುದು ವಿಷಾದದ ವಿಚಾರ. ಕೇಂದ್ರ ಸರ್ಕಾರ ತ್ವರಿತವಾಗಿ ಸಿಬಿಐ ತನಿಖೆಗೆ ಆದೇಶಿಸಿದೆ. ಈ ವಿಚಾರದಲ್ಲಿ ಸರ್ಕಾರವನ್ನು ದೂರುವುದು ಸಲ್ಲದು. ಆತಂಕದಲ್ಲಿರುವ ಮಕ್ಕಳ ಜೊತೆ ನೈತಿಕವಾಗಿ ನಿಲ್ಲಬೇಕು’ ಎಂದು ಹೇಳಿದರು.

ಕೋವಿಡ್ ಸಮಯದಲ್ಲಿ ನರೇಂದ್ರ ಮೋದಿ ಅವರು ದೇಶಕ್ಕೆ ಮಾರ್ಗದರ್ಶನ ನೀಡಿದ್ದರು. ಈಗ ಯುದ್ಧದ ಪರಿಸ್ಥಿತಿಯಲ್ಲಿ ಮಾರ್ಗದರ್ಶನ ನೀಡುತ್ತಿದ್ದಾರೆ. ₹8 ಲಕ್ಷ ಕೋಟಿ ಕಚ್ಚಾ ತೈಲ ಅಮದು ಮಾಡಿಕೊಳ್ಳುತ್ತಿದ್ದೇವೆ. ಹೀಗಾಗಿ ಕಡಿಮೆ ಬಳಕೆ ಮಾಡಿ ಎನ್ನುವುದು ದೊಡ್ಡ ತಪ್ಪೇ ಎಂದರು.

ಅತಿ ಹೆಚ್ಚುವರಿ ಬಂಗಾರ ಖರೀದಿಸುವ ಎರಡನೇ ದೇಶ ಭಾರತ. 1 ವರ್ಷದಲ್ಲಿ ನಾಲ್ಕೂವರೆ ಕೋಟಿ ಜನರು ವಿದೇಶ ಪ್ರವಾಸ ಹೋಗಿದ್ದಾರೆ. ಹೀಗಾಗಿ ದೇಶ ಉಳಿಯಲಿ ಎಂದು ಮೋದಿ ಹೇಳಿದ್ದಾರೆ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-18-1373560322

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.