ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅಕಾಲಿಕ ಮಳೆ-ಗಾಳಿ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯ ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ, ಶಾಲೆ ಮತ್ತು ಅಂಗನವಾಡಿ ಕೇಂದ್ರಗಳ ಕಟ್ಟಡಗಳನ್ನು ಗುರುತಿಸಬೇಕು. ಅಲ್ಲದೆ, ಅಲ್ಲಿನ ಸರ್ಕಾರಿ ಕಚೇರಿಗಳನ್ನು ಅನ್ಯ ಕಟ್ಟಡಗಳಿಗೆ ಸ್ಥಳಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಪ್ರಭು ತಿಳಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯ ಗ್ರಾಮಾಂತರ ಪ್ರದೇಶದಲ್ಲಿನ ಕಟ್ಟಡಗಳನ್ನು ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ಪರಿಶೀಲನೆ ಮಾಡಿ, ಆಯಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಾಂತ್ರಿಕ ವರದಿ ಸಲ್ಲಿಸಬೇಕು. ನಗರ ಪ್ರದೇಶಗಳಲ್ಲಿನ ಕಟ್ಟಡಗಳನ್ನು ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು, ಎಂಜಿನಿಯರ್ಗಳು ಪರಿಶೀಲಿಸಿ, ಆಯಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಾಂತ್ರಿಕ ವರದಿ ಸಲ್ಲಿಸಬೇಕು. ಅಲ್ಲದೆ, ಅದರ ಪ್ರತಿಯನ್ನು ಕೂಡಲೇ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದು ಹೇಳಿದರು.

ವರದಿ ಸ್ವೀಕೃತಗೊಂಡ ನಂತರ ಸಂಬಂಧಪಟ್ಟ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳು ಹಾಗೂ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿರುವ ಮಕ್ಕಳನ್ನು ಸುಸ್ಥಿತಿಯಲ್ಲಿರುವ ಕಟ್ಟಡಗಳಿಗೆ ಸ್ಥಳಾಂತರಿಸಬೇಕು. ಯೋಗ್ಯವಲ್ಲದ ಮತ್ತು ತೀರಾ ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ಮತ್ತು ಖಾಲಿ ಇರುವ ಹಳೆಯ ಕಟ್ಟಡಗಳನ್ನು ಎಂಜಿನಿಯರ್ ವಿಭಾಗದ ಮೂಲಕ ತಪಾಸಣೆ ನಡೆಸಿ, ನೆಲಸಮ ಮಾಡುವ ಬಗ್ಗೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-16-316877428

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.