ಚಿಕ್ಕಬಳ್ಳಾಪುರ: ಶಿಕ್ಷಕ ವೃತ್ತಿ ಭಾಗ್ಯವಂತರ ಕೆಲಸ. ಶಿಕ್ಷಕ ಸಮುದಾಯದವರು ಎಲ್ಲ ಕ್ಷೇತ್ರಗಳನ್ನು ಬೆಳೆಸುವ ಗಾರುಡಿಗರು ಎಂದು ಬೆಂಗಳೂರು ಉತ್ತರ ವಿವಿ ಕುಲಪತಿ ಬಿ.ಕೆ.ರವಿ ಹೇಳಿದರು.

ನಗರ ಹೊರವಲಯದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಂಗಳವಾರ ಬೆಂಗಳೂರು ಉತ್ತರ ವಿವಿಯ ಮೌಲ್ಯಮಾಪನ ಕುಲಸಚಿವ ಎನ್.ಲೋಕನಾಥ್ ಅವರಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಶಿಕ್ಷಕ ವೃತ್ತಿ ಎಂಬುದು ಸಾಮಾಜಿಕ ಬದಲಾವಣೆ ತರುವ ಹುದ್ದೆ. ಶಿಕ್ಷಕನಿಗೆ ನಿವೃತ್ತಿ ಇರುವುದಿಲ್ಲ. ಲೋಕನಾಥ್ ಇದೇ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ 31 ವರ್ಷ ಕೆಲಸ ಮಾಡಿದರು. ನಂತರ ಮೌಲ್ಯಮಾಪನ ಕುಲಸಚಿವರಾಗಿ ಸಾರ್ಥಕ ಕೆಲಸ ಮಾಡಿದ್ದಾರೆ ಎಂದರು.

ಎನ್.ಲೋಕನಾಥ್ ಮಾತನಾಡಿ, ಶಿಕ್ಷಕ, ಸಾಹಿತಿ, ಪತ್ರಕರ್ತ, ಹೋರಾಟಗಾರರಿಗೆ ನಿವೃತ್ತಿ ಇರುವುದಿಲ್ಲ ಎಂದರು. ತಮ್ಮ ಕೆಲಸದ ಹಾದಿಯನ್ನು ನೆನಪಿಸಿಕೊಂಡರು.

ಕಸಾಪ ಜಿಲ್ಲಾ ಅಧ್ಯಕ್ಷ ಪ್ರೊ. ಕೋಡಿರಂಗಪ್ಪ, ಬಿ.ಜಿ.ಎಸ್. ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಎನ್. ಶಿವರಾಮರೆಡ್ಡಿ, ಕಾಲೇಜಿನ ಪ್ರಾಂಶುಪಾಲ ಜಿ.ಪಿ.ಬಾಹುಬಲಿ, ಪ್ರಾಧ್ಯಾಪಕ ಶಂಕರ್, ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಆರ್.ರೆಡ್ಡಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-16-1466810826

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.