ಚಿಕ್ಕಬಳ್ಳಾಪುರ: ಇನ್ನಮಿಂಚೆನಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಲಾರಿ ಮತ್ತು ಕಾರಿನ ಮಧ್ಯೆ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ ನಾಗರಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗುಡಿಬಂಡೆ ತಾಲ್ಲೂಕಿನ ಪಿಎಲ್ಡಿ ಬ್ಯಾಂಕ್ನ ಮಾಜಿ ಅಧ್ಯಕ್ಷ ಹನುಮಂತರೆಡ್ಡಿ (75) ಮೃತಪಟ್ಟವರು. ಲಾರಿಯೊಂದು ಚಿಕ್ಕಬಳ್ಳಾಪುರ ಕಡೆಯಿಂದ ಬೆಂಗಳೂರು ಕಡೆಗೆ ತೆರಳಲು ರಾಷ್ಟ್ರೀಯ ಹೆದ್ದಾರಿ 44ರ ಪ್ರಣವ್ ಹೋಟೆಲ್ ಮುಂಭಾಗ ಬಲ ತಿರುವು ಪಡೆಯುತ್ತಿತ್ತು. ಈ ವೇಳೆ ಹನುಮಂತರೆಡ್ಡಿ ಅವರ ಚಾಲನೆ ಮಾಡಿಕೊಂಡು ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಬಾಲಕಿ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನ ಬ್ಯಾಪ್ಟಿಸ್ ಆಸ್ಪತ್ರೆಯಿಂದ ವಾಪಸ್ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಪೇರೆಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-16-1368802262

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.