ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

64 ಮಂದಿಗೆ ಕೊರೊನಾ, 16 ಮಂದಿ‌ ಗುಣಮುಖ

Last Updated 25 ಜುಲೈ 2020, 6:06 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 64 ಕೋವಿಡ್–19 ಪ್ರಕರಣಗಳು ವರದಿಯಾಗಿದೆ. ತೀವ್ರ ಉಸಿರಾಟ ಮತ್ತು ಜ್ವರದಿಂದ ಬಳಲುತ್ತಿದ್ದ ಚಿಕ್ಕಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 26ಕ್ಕೇರಿದೆ. ಇದುವರೆಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟು 1258ಕ್ಕೆ ಏರಿಕೆಯಾಗಿದೆ.

ಶುಕ್ರವಾರ ಜಿಲ್ಲೆಯಲ್ಲಿ ಒಟ್ಟು 16 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇದುವರೆಗೆ ಒಟ್ಟು 589 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು 921 ಮಂದಿಯ ಗಂಟಲುಸ್ರಾವವನ್ನು ಕೋವಿಡ್– 19 ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ 590 ಮಂದಿಯ ಫಲಿತಾಂಶ ನೆಗೆಟಿವ್ ಬಂದಿದೆ. 64 ಮಂದಿಯ ವರದಿ ಪಾಸಿಟಿವ್ ಬಂದಿದೆ. ಜತೆಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ 169 ಹಾಗೂ ದ್ವಿತೀಯ ಸಂಪರ್ಕದಲ್ಲಿ 8 ಮಂದಿ ಇದ್ದಾರೆ.

ಜಿಲ್ಲೆಯಲ್ಲಿ ‌ಇದುವರೆಗೆ ಒಟ್ಟು 1,258 ಪ್ರಕರಣಗಳು ದೃಢಪಟ್ಟಿವೆ. ಅದರಲ್ಲಿ 589 ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದ 642 ಮಂದಿ‌ ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕ್ಕಬಳ್ಳಾಪುರ 7, ಬಾಗೇಪಲ್ಲಿ 5, ಚಿಂತಾಮಣಿ 3, ಗುಡಿಬಂಡೆಯ ಒಬ್ಬರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲಾ ಮಟ್ಟದ ಅಧಿಕಾರಿಗಳು ಒಂದೊಂದು‌ ತಾಲ್ಲೂಕಿಗೆ ಭೇಟಿ‌ ನೀಡಿ ಅಲ್ಲಿನ ಟಾಸ್ಕ್‌ಪೋರ್ಸ್ ಸಮಿತಿಯೊಂದಿದೆ
ಚರ್ಚಿಸಿ ಅಗತ್ಯ ಕ್ರಮ ‌ಕೈಗೊಳ್ಳಲು ಮುಂದಾಗಿದ್ದಾರೆ. ಜತೆಗೆ ಸ್ಥಳೀಯ ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು‌ ಸಿಬ್ಬಂದಿ ನಿಯಂತ್ರಣ ಕ್ರಮಗಳನ್ನು ಪಾಲಿಸಲು‌ ಮುಂದಾಗಿ ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT