ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಐದು ಲಕ್ಷ ಸಸಿಗಳನ್ನು ನೆಡುವ ಸಂಬಂಧ ಹೈಕೋರ್ಟ್ ನ್ಯಾಯಮೂರ್ತಿ ಹಂಚಾಟೆ ಸಂಜೀವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಜಿಲ್ಲಾ ನ್ಯಾಯಾಲಯದಲ್ಲಿ ಸಭೆ ನಡೆಯಿತು.

ಜಿಲ್ಲೆಯ ಎಲ್ಲಾ ಕೈಗಾರಿಕೆಗಳ ವ್ಯವಸ್ಥಾಪಕರು, ಬ್ಯಾಂಕುಗಳ ವ್ಯವಸ್ಥಾಪಕರು, ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ಸಮಾಜ ಸೇವಕರು, ಕಾರ್ಮಿಕ ಸಂಘಟನೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ಪಾಲ್ಗೊಂಡು ಅಭಿಪ್ರಾಯ ಹಂಚಿಕೊಂಡರು.

ಈ ವೇಳೆ ಅವರು ಮಾತನಾಡಿ ನ್ಯಾಯಮೂರ್ತಿ ಹಂಚಾಟೆ ಸಂಜೀವಕುಮಾರ್, ಜಿಲ್ಲೆಯಾದ್ಯಂತ 5 ಲಕ್ಷ ಗಿಡಗಳನ್ನು ನೆಡಲು ಯೋಜನೆ ರೂಪಿಸಲಾಗಿದೆ. ಈ ಯೋಜನೆಯಿಂದ ಜಿಲ್ಲೆಯಲ್ಲಿ ಉತ್ತಮ ವಾತಾವರಣ ಹಾಗೂ ಅಂತರ್ಜಲ ವೃದ್ಧಿ ಆಗುತ್ತದೆ. ಪರಿಸರ ಕಾಳಜಿಯುಳ್ಳ ಎಲ್ಲರೂ ಕೈ ಜೋಡಿಸಬೇಕು. ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಟಿ.ಪಿ. ರಾಮಲಿಂಗೇಗೌಡ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಶಿಧರ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಶಿಲ್ಪಾ ಬಿ., ಜಿಲ್ಲೆಯ ನ್ಯಾಯಾಧೀಶರು, ವಕೀಲರ ಸಂಘದ ಅಧ್ಯಕ್ಷ ಕೆ.ವಿ ಅಭಿಲಾಷ್ ಸಭೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-16-730276057

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.