ಚಿಕ್ಕಬಳ್ಳಾಪುರ: ಕರಕುಶಲ ಕರ್ಮಿಗಳು ಈಗಿನ ಬೇಡಿಕೆಗೆ ತಕ್ಕಂತೆ ಯಾವ ಸೇವೆ ಹಾಗೂ ಉತ್ಪನ್ನಗಳನ್ನು ನೀಡಬಹುದು ಎಂಬುದನ್ನು ಕೇಂದ್ರ ಸರ್ಕಾರದ ವಿಶ್ವಕರ್ಮ ಯೋಜನೆ ಕಲಿಸುತ್ತದೆ. ಆದ್ದರಿಂದ ಯುವಜನರು ಈ ಯೋಜನೆಯ ಸದುಪಯೋಗ ಪಡೆಯಬೇಕು ಎಂದು ಸಂಸದ ಡಾ.ಕೆ.ಸುಧಾಕರ್ ತಿಳಿಸಿದರು.

ಅಂಚೆ ಇಲಾಖೆಯಿಂದ ಇಲ್ಲಿನ ಕನ್ನಡ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪಿ.ಎಂ ವಿಶ್ವಕರ್ಮ ಟೂಲ್ಕಿಟ್ ವಿತರಣೆ ಹಾಗೂ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಳೆ ಕಾಲದ ವಿನ್ಯಾಸದಂತೆಯೇ ಉತ್ಪನ್ನಗಳನ್ನು ತಯಾರಿಸಿದರೆ ಅದಕ್ಕೆ ಬೇಡಿಕೆ ಬರುವ ಸಾಧ್ಯತೆ ಕಡಿಮೆ. ಉದಾಹರಣೆಗೆ, ಈಗಿನ ಮಹಿಳೆಯರ ಅಭಿರುಚಿಗೆ ತಕ್ಕಂತೆ ಸೀರೆಗಳನ್ನು ತಯಾರಿಸಿದರೆ ಅದಕ್ಕೆ ಉತ್ತಮ ಬೆಲೆ ಹಾಗೂ ಬೇಡಿಕೆ ದೊರೆಯುತ್ತದೆ. ಇಂತಹ ಯೋಜನೆಯನ್ನು ಬಳಸಿಕೊಳ್ಳಬೇಕು. ಯುವಜನರು ಉದ್ಯೋಗ ಅರಸದೆ ಉದ್ಯೋಗ ನೀಡುವವರಾಗಬೇಕು ಎಂದು ಸಲಹೆ ನೀಡಿದರು.

ಕರಕುಶಲ ವೃತ್ತಿಯಲ್ಲಿರುವವರು ವಹಿವಾಟನ್ನು ಇನ್ನಷ್ಟು ಬೆಳೆಸಿಕೊಳ್ಳಲು ಹಾಗೂ ತರಬೇತಿ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ವಿಶ್ವಕರ್ಮ ಯೋಜನೆ ಜಾರಿಗೊಳಿಸಿದೆ. ಇದರಡಿ ₹2 ಲಕ್ಷ ಸಾಲ ನೀಡಲಾಗುತ್ತಿದೆ. ಕರಕುಶಲ ವೃತ್ತಿ ಎಂದರೆ ಕೇವಲ ಉದ್ಯೋಗವಲ್ಲ, ಇದು ನಮ್ಮ ದೇಶದ ಸಂಸ್ಕೃತಿ, ಪರಂಪರೆ ಹಾಗೂ ಹೆಗ್ಗುರುತು ಎಂದು ಹೇಳಿದರು.

ಕಮ್ಮಾರ, ಬಡಗಿ, ಶಿಲ್ಪಿ, ಅಕ್ಕಸಾಲಿಗರು, ಚಮ್ಮಾರರು, ಮೇಸ್ತ್ರಿ, ಬುಟ್ಟಿ ತಯಾರಕರು, ಬೊಂಬೆ ತಯಾರಕರು ಹೀಗೆ ಅನೇಕ ಉದ್ಯೋಗಿಗಳು ನಮ್ಮ ಸಮಾಜದ ಬೆನ್ನುಲುಬು. ಆದರೆ ಈ ಸಮುದಾಯ, ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದ್ದಾರೆ ಎಂದು ಅನೇಕರು ಅರಿತಿಲ್ಲ. ಇದನ್ನು ಅರಿತು ಅವರಿಗೆ ಗೌರವ ನೀಡಬೇಕು ಎಂದರು.

ಬೆಂಗಳೂರನ್ನು ನಿರ್ಮಿಸಿದ ನಾಡಪ್ರಭು ಕೆಂಪೇಗೌಡರು ಅಕ್ಕಿಪೇಟೆ, ಚಿಕ್ಕಪೇಟೆ, ಬಳೇಪೇಟೆ, ರಾಗಿಪೇಟೆ ಸೇರಿದಂತೆ 50 ಪೇಟೆಗಳನ್ನು ನಿರ್ಮಿಸಿದ್ದರು. ವಂಶಪಾರಂಪರ್ಯವಾಗಿ ಕರಕುಶಲ ವೃತ್ತಿ ಮಾಡುವವರಿಗೆ ಸಂತೆಗಳನ್ನು ನಿರ್ಮಿಸಿದ್ದರು ಎಂದರು.

ಗ್ರಾಮೀಣ ಸ್ವಾವಲಂಬನೆ ಬಗ್ಗೆ ಹೇಳಿದ್ದ ಮಹಾತ್ಮ ಗಾಂಧೀಜಿ ಕರಕುಶಲಕರ್ಮಿ ಗಳಿಂದ ಗ್ರಾಮೀಣ ಆರ್ಥಿಕತೆ ಬೆಳೆಯುತ್ತದೆ ಎಂದು ನಂಬಿದ್ದರು. ಸ್ಥಳೀಯ ಉದ್ಯಮಗಳನ್ನು ಬೆಳೆಸುವುದು ಅವರ ಆದ್ಯತೆ ಆಗಿತ್ತು. ಅದೇ ರೀತಿ ಪ್ರಧಾನಿ ನರೇಂದ್ರ ಮೋದಿ ಕರಕುಶಲಕರ್ಮಿಗಳಿಗೆ ವಿಶ್ವಕರ್ಮ ಯೋಜನೆಯಡಿ ಒತ್ತು ನೀಡಿದ್ದಾರೆ ಎಂದರು.

ಸಾಂಪ್ರದಾಯಿಕ ಕರಕುಶಲ ಕಲೆಯನ್ನು ಉಳಿಸಿ ಆರ್ಥಿಕ ಚೈತನ್ಯ ನೀಡುವುದು ವಿಶ್ವಕರ್ಮ ಯೋಜನೆಯ ಉದ್ದೇಶ. 18 ಬಗೆಯ ವೃತ್ತಿಗಳಿಗೆ ಇದರಲ್ಲಿ ಪ್ರೋತ್ಸಾಹ ನೀಡಲಾಗುತ್ತಿದೆ. ಕರಕುಶಲ ಕರ್ಮಿಗಳಿಗೆ ಶೇ 5 ಬಡ್ಡಿದರದ ಸಾಲ ದೊರೆಯುತ್ತದೆ. ಉಳಿದ ಹಣವನ್ನು ಕೇಂದ್ರ ಸರ್ಕಾರ ಪಾವತಿಸುತ್ತದೆ. ಇದರಲ್ಲಿ ಸಂಪೂರ್ಣ ಉಚಿತವಾಗಿ ತರಬೇತಿ ನೀಡಲಾಗುತ್ತದೆ. ಈವರೆಗೆ 1.49 ಲಕ್ಷ ಜನರಿಗೆ ₹ 1,190 ಕೋಟಿ ಸಾಲ ಸಿಕ್ಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ 300 ಕರಕುಶಲಕರ್ಮಿಗಳಿಗೆ ಟೂಲ್ಕಿಟ್ ವಿತರಿಸಲಾಗುತ್ತಿದೆ. ಇಲ್ಲಿಯವರೆಗೆ 11,000 ಕ್ಕೂ ಹೆಚ್ಚು ಮಂದಿಗೆ ವಿತರಿಸಿದ್ದು ಇವತ್ತಿನದೂ ಸೇರಿ ಒಟ್ಟು ಸುಮಾರು 12,000 ಮಂದಿಗೆ ಟೂಲ್ಕಿಟ್ ವಿತರಿಸಲಾಗಿದೆ ಎಂದು ವಿವರಿಸಿದರು.

ಲೀಡ್ ಬ್ಯಾಂಕ್ ವ್ಯವಸ್ಥಾಪಕ ವೆಂಕಟಕೃಷ್ಣ, ಗಜೇಂದ್ರ, ಮುನಿರಾಜು ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-16-759657236

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.