ಚಿಕ್ಕಬಳ್ಳಾಪುರ: ಮತದಾರರ ಪಟ್ಟಿಯವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ವಿರೋಧಿಸಿ 30 ನಗರದಲ್ಲಿ ‘ಎದ್ದೇಳು ಕರ್ನಾಟಕ’ದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ನಗರದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ರಾಜ್ಯ ಖಜಾಂಚಿ ಶ್ರೀಕಂಠಾಚಾರಿ, ಕೇಂದ್ರ ಚುನಾವಣಾ ಆಯೋಗ ಸಂವಿಧಾನ ವಿರೋಧಿ ನಿಲುವು ತಾಳಿದೆ. ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಎಸ್ಐಆರ್ ಪರಿಣಾಮ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದೆ. ರಾಜ್ಯದಲ್ಲೂ ಎಸ್ಐಆರ್ ನಡೆದರೆ ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬರುವ ಅಪಾಯವಿದೆ. ಆದ್ದರಿಂದ ರಾಜ್ಯದಲ್ಲಿ ಎಸ್ಐಆರ್ ಅನುಷ್ಠಾನ ಮಾಡಲು ಬಿಡದೆ ಜನರು ಹೋರಾಟ ಮಾಡಬೇಕು ಎಂದರು.

30ರಂದು ಹೋರಾಟಕ್ಕೆ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟಗಳು ಬೆಂಬಲ ಸೂಚಿಸಿವೆ. ಜವಾಬ್ದಾರಿಯುತ ನಾಗರಿಕರು, ಪ್ರಗತಿಪರ ಚಿಂತಕರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಎಸ್ಐಆರ್ ಪ್ರಕ್ರಿಯೆ ಸಂವಿಧಾನದ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ತನ್ನ ನಿಯಂತ್ರಣದಲ್ಲಿ ಇಟ್ಟುಕೊಂಡು ತಮ್ಮ ಅನುಕೂಲಕ್ಕೆ ತಕ್ಕಂತೆ ನಿಯಮ ರೂಪಿಸಿ ಈ ಪ್ರಕ್ರಿಯೆ ನಡೆಸುತ್ತಿದೆ ಎಂದು ಆರೋಪಿಸಿದರು.

2002ರ ಪಟ್ಟಿಯಲ್ಲಿ ಹೆಸರು ಇಲ್ಲದ ಮತದಾರರಿಗೆ ಭಾರತೀಯ ನಾಗರಿಕರೆಂದು ಸಾಬೀತುಪಡಿಸಲು ದಾಖಲೆಗಳನ್ನು ಕೇಳಲಾಗುತ್ತಿದೆ. ಅಲ್ಲದೆ ಹೆಸರಿನಲ್ಲಿನ ಸಣ್ಣಪುಟ್ಟ ತಪ್ಪುಗಳನ್ನು ಕಾರಣವನ್ನಾಗಿ ಮಾಡಿ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ದೂರಿದರು.

ಕೆಪಿಸಿಸಿ ಅಲ್ಪಸಂಖ್ಯಾತ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಹಮದ್ ನೂರುಲ್ಲಾ, ‘ಎದ್ದೇಳು ಕರ್ನಾಟಕ’ ಜಿಲ್ಲಾ ಸಂಚಾಲಕ ಶಾಮೀರ್, ವೆಂಕಟೇಶ್, ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಪರಮೇಶ್, ರಾಜು, ಜೀವಿಕ ಸಂಘಟನೆ ತಾಲ್ಲೂಕು ಸಂಚಾಲಕ ಶ್ರೀನಿವಾಸ್, ಎಸ್ಡಿಪಿಐನ ಮಹಮದ್ ಮುಸ್ತಪಾ, ಅಫ್ಜಲ್ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-16-994425310

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.