ಚಿಕ್ಕಬಳ್ಳಾಪುರ: ನಗರಾಡಳಿತ ಸಂಸ್ಥೆಗಳ ವ್ಯಾಪ್ತಿಯ ಜಲಮೂಲಗಳ ಸಮರ್ಪಕ ಬಳಕೆ ಮತ್ತು ಬಳಸಿದ ನೀರಿನ ನಿರ್ವಹಣಾ ವ್ಯವಸ್ಥೆಗಳ ಮೌಲ್ಯ ಮಾಪನ ನಡೆಸಿ ಸುಸ್ಥಿರ ನಿರ್ವಹಣಾ ಕ್ರಮಗಳನ್ನು ಅಳವಡಿಸಿಕೊಳ್ಳುವ ಉದ್ದೇಶದಿಂದ ‘ಜಿಲ್ಲೆಯ ನಗರಗಳ ನೀರಿನ ಸ್ಥಿತಿ ಸ್ಥಾಪಕತ್ವ ನಿರ್ಮಾಣ ಸಹಕಾರ’ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ನಗರಗಳ ನೀರಿನ ಸ್ಥಿತಿ ಸ್ಥಾಪಕತ್ವ ನಿರ್ಮಾಣ ಸಹಕಾರ ಕುರಿತ ತರಬೇತಿ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯ ಆರು ನಗರ ಸ್ಥಳೀಯ ಸಂಸ್ಥೆಗಳು, ಸಿಡಿಆರ್ಐ ಹಾಗೂ ಐಐಎಚ್ಎಸ್ ಸಹಭಾಗಿತ್ವದಲ್ಲಿ‘ಜಿಲ್ಲೆಯ ನಗರಗಳ ನೀರಿನ ಸ್ಥಿತಿ ಸ್ಥಾಪಕತ್ವ ನಿರ್ಮಾಣ ಸಹಕಾರ’ ಎಂಬ ಯೋಜನೆಯನ್ನು 2026ರ ಏಪ್ರಿಲ್ನಿಂದ 2028ರ ಮಾರ್ಚ್ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಈ ಯೋಜನೆಯಡಿ ಲಭ್ಯ ನೀರಿನ ಬಳಕೆ ಮತ್ತು ಬಳಸಿದ ನೀರಿನ ನಿರ್ವಹಣಾ ವ್ಯವಸ್ಥೆಗಳ ಸಮಗ್ರ ಮೌಲ್ಯ ಮಾಪನ ನಡೆಸಲಾಗುತ್ತದೆ. ಸುಸ್ಥಿರ ನಿರ್ವಹಣಾ ಕ್ರಮಗಳನ್ನು ಅಳವಡಿಸಿಕೊಳ್ಳಲು ತಾಂತ್ರಿಕ ಮಾರ್ಗಸೂಚಿ ಸಿದ್ಧಪಡಿಸಲಾಗುತ್ತದೆ. ಸ್ಥಳೀಯ ಸಂಸ್ಥೆಗಳ ನೀರಿನ ಪೂರೈಕೆಯ ನಿರ್ವಹಣಾ ಸಾಮರ್ಥ್ಯವನ್ನು ಹೆಚ್ಚಿಸಲು ಯೋಜಿಸಲಾಗಿದೆ ಎಂದರು.

ನೀರಿನ ಸೌಕರ್ಯ ಒದಗಿಸುವಲ್ಲಿ ಇರುವ ಕೊರತೆಗಳನ್ನು ವಿಶ್ಲೇಷಿಸುವುದು, ಸುರಕ್ಷಿತ ಮತ್ತು ಪರಿಣಾಮಕಾರಿ ನೀರಿನ ಮರುಬಳಕೆ ಉತ್ತೇಜಿಸುವ ಮೂಲಕ ನೀರಿನ ಸ್ಥಿತಿಸ್ಥಾಪಕತ್ವ ವೃದ್ಧಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಈ ಯೋಜನೆಗೆ ಸಂಬಂಧಿಸಿದ ಪ್ರಮುಖ ಪಾಲುದಾರರೊಂದಿಗೆ ಪ್ರಾರಂಭಿಕ ಹಂತದ ಚರ್ಚೆಗಳು ಆರಂಭವಾಗಿದೆ ಎಂದು ವಿವರಿಸಿದರು.

ಇಂಡಿಯನ್ ಇನ್ಸ್ಟಿಟ್ಯೂಟ್ ಫಾರ್ ಹ್ಯೂಮನ್ ಸೆಟಲ್ಮೆಂಟ್ಸ್ (ಐಐಎಚ್ಎಸ್) ಮತ್ತು ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಯೋಜನೆ ಪ್ರಾರಂಭಿಸಲಾಗಿದೆ. ಕರ್ನಾಟಕದ ಆರು ಸಣ್ಣ ನಗರಗಳಲ್ಲಿ ನೀರು, ಬಳಸಿದ ನೀರು, ಹವಾಮಾನ ವೈಪರೀತ್ಯ ನಿರ್ವಹಣೆ ಮತ್ತು ವಿಪತ್ತು ನಿರ್ವಹಣೆಗೆ ತಾಂತ್ರಿಕ ಸಹಕಾರ ನೀಡುವ ಯೋಜನೆಯನ್ನು ಜಿಲ್ಲೆಯಲ್ಲಿ ಅಧಿಕೃತವಾಗಿ ಪ್ರಾರಂಭಿಸಿರುವುದು ಸಂತಸ ತಂದಿದೆ ಎಂದರು.

ಸಿಡಿಆರ್ಐ ಪ್ರತಿನಿಧಿ ಮಹೇಶ್ವರ ರಾಜಶೇಖರ್ ಮಾತನಾಡಿ, ‘ಈ ಯೋಜನೆಯು ಬಾಗೇಪಲ್ಲಿ, ಚಿಂತಾಮಣಿ, ಚಿಕ್ಕಬಳ್ಳಾಪುರ, ಗುಡಿಬಂಡೆ, ಗೌರಿಬಿದನೂರು ಮತ್ತು ಶಿಡ್ಲಘಟ್ಟ ನಗರವನ್ನು ಒಳಗೊಂಡಿದೆ’ ಎಂದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ನಿರ್ದೇಶಕ ಮಂಜುನಾಥ, ಐಐಎಚ್ಎಸ್ ಸಂಸ್ಥೆಯ ಪ್ರತಿನಿಧಿ ಅಮೀರ್ ಬಷೀರ್ ಬಜಾಜ್, ಸಿಡಿಆರ್ಐ ಸಂಸ್ಥೆಯ ಪ್ರತಿನಿಧಿಗಳಾದ ಎಸ್. ಜಿ. ಸುಜಯ್, ಉಮಾ ಮಹೇಶ್ವರ, ನಗರಾಡಳಿ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-16-684442099

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.