ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಜಿಲ್ಲಾಡಳಿತ ಸಹ ಈ ವಿಚಾರದಲ್ಲಿ ಹೆಚ್ಚು ಮುನ್ನೆಚ್ಚರಿಕೆವಹಿಸಿದೆ. ಜಿಲ್ಲಾಧಿಕಾರಿ ಜಿ.ಪ್ರಭು ಸರಣಿ ಸಭೆಗಳನ್ನೂ ನಡೆಸುತ್ತಿದ್ದಾರೆ.

ಆದರೆ ಈ ಸಮಸ್ಯೆಗಳ ಪರಿಹಾರಕ್ಕೆ ಹೋಬಳಿವಾರು ನೇಮಕ ಆಗಿರುವ ಅಧಿಕಾರಿಗಳು ಮಾತ್ರ ನಿಯೋಜಿತ ಹೋಬಳಿಗಳತ್ತ ತಲೆ ಹಾಕಿಲ್ಲ! ಈ ಮೂಲಕ ಜಿಲ್ಲಾಧಿಕಾರಿ ಮತ್ತು ಮುಖ್ಯಮಂತ್ರಿ ಅವರ ಆದೇಶವನ್ನೇ ಕೆಲವು ಅಧಿಕಾರಿಗಳು ಪಾಲಿಸುತ್ತಿಲ್ಲ.

ಜಿಲ್ಲೆಯ 8 ತಾಲ್ಲೂಕಿನ 26 ಹೋಬಳಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಮೇವಿನ ಲಭ್ಯತೆ, ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲನೆ ಹಾಗೂ ಮೇಲುಸ್ತುವಾರಿ ಮಾಡಲು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಸಾರ್ವಜನಿಕರು ಕುಂದು ಕೊರತೆಗಳು ಇದ್ದಲ್ಲಿ ಸಂಬಂಧ ಪಟ್ಟ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಬಹುದು.

ಹೋಬಳಿಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೇ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಈ ನೋಡಲ್ ಅಧಿಕಾರಿಗಳಲ್ಲಿ ಅರ್ಥಕ್ಕಿಂತ ಹೆಚ್ಚು ಮಂದಿ ಹೋಬಳಿಗಳಿಗೆ ಭೇಟಿಯನ್ನೇ ನೀಡಿಲ್ಲ.

ಪ್ರತಿ ವಾರದಲ್ಲಿ ಕನಿಷ್ಠ ಒಂದು ದಿನ ತಮಗೆ ನಿಯೋಜಿತವಾಗಿರುವ ಹೋಬಳಿಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು. ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳನ್ನು ಅವಲೋಕಿಸಿ ವರದಿಯನ್ನು ಸಲ್ಲಿಸಬೇಕು ಎಂದು ಏಪ್ರಿಲ್ 21ರಂದು ಜಿಲ್ಲಾಧಿಕಾರಿ ಆದೇಶಿಸಿದ್ದರು.

ಆದರೆ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಕೇವಲ 26ರಲ್ಲಿ 11 ನೋಡಲ್ ಅಧಿಕಾರಿಗಳು ಮಾತ್ರ ನಿಯೋಜಿಸಿರುವ ಹೋಬಳಿಗಳಿಗೆ ಭೇಟಿ ನೀಡಿದ್ದಾರೆ. ಉಳಿದ ನೋಡಲ್ ಅಧಿಕಾರಿಗಳು ಹೋಬಳಿಗಳತ್ತ ಮುಖ ಮಾಡಿಲ್ಲ.

ಭೇಟಿ ನೀಡದ ಅಧಿಕಾರಿಗಳ ವಿರುದ್ಧ ಇತ್ತೀಚೆಗೆ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವರ್ತನೆ ಪುನರಾವರ್ತನೆ ಆಗಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಯಿಂದ ನೇಮಕಕ್ಕೆ ಸೂಚನೆ: ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ, ಜಾನುವಾರು ಮೇವಿನ ಸ್ಥಿತಿಗತಿ, ಹವಾಮಾನ ಪರಿಸ್ಥಿತಿ, ಕೃಷಿ ಚಟುವಟಿಕೆಗಳ ಸಿದ್ಧತೆ ಕುರಿತು ಮುಖ್ಯಮಂತ್ರಿ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಆ ಸಭೆಯಲ್ಲಿ ತೀರ್ಮಾನಿಸಿದಂತೆ ಪ್ರತಿ ಹೋಬಳಿಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು ಎಂದಿದ್ದರು. ಮುಖ್ಯಮಂತ್ರಿ ಅವರ ನಿರ್ದೇಶನದ ಮೇರೆಗೆ ಜಿಲ್ಲಾಧಿಕಾರಿ ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದರು.

ಅಧಿಕಾರಿ ಭೇಟಿ ನೀಡಿ ಏನು ಮಾಡಬೇಕು: ನೋಡಲ್ ಅಧಿಕಾರಿಗಳು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮೇಲುಸ್ತುವಾರಿ ವಹಿಸಬೇಕು. ಒಂದು ವೇಳೆ ಸಮಸ್ಯೆ ಉಂಟಾದಲ್ಲಿ ಸ್ಥಳೀಯ ಸಂಸ್ಥೆಗಳು ಖಾಸಗಿ ಕೊಳವೆ ಬಾವಿ, ಟ್ಯಾಂಕರ್ಗಳ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡುವುದನ್ನು ಖಚಿತಪಡಿಸಿಕೊಳ್ಳಬೇಕು.

ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಬೇಕು. ದುರಸ್ತಿ ಅಥವಾ ಇನ್ನಿತರ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ನೀರಿನ ಗುಣಮಟ್ಟ ಪರಿಶೀಲಿಸಬೇಕು. ಕುಡಿಯುವ ನೀರು ಶುದ್ಧವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಮೇವಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಿ ಮೇವಿನ ಕೊರತೆ ಕಂಡು ಬಂದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ವರದಿ ಸಲ್ಲಿಸಬೇಕು.

ಸಮಸ್ಯಾತ್ಮಕ ವಿಷಯಗಳ ಬಗ್ಗೆ ಚರ್ಚಿಸಿ ಲಿಖಿತವಾಗಿ ವರದಿ ಸಲ್ಲಿಸಬೇಕು. ಪರಿಶೀಲನೆ ಅವಧಿಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಟಾಸ್ಕ್ಪೋರ್ಸ್ ಸಮಿತಿಗೆ ಮಾಹಿತಿ ನೀಡಬೇಕು. ಸಮನ್ವಯ ಸಾಧಿಸಿ ಆ ಸಮಸ್ಯೆ ಪರಿಹರಿಸಬೇಕು. ಈ ಬಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕು ಎಂದು ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದ್ದರು. ಭೇಟಿ ನೀಡಿದ ದಿನಾಂಕ, ವಿಷಯ ಮತ್ತು ಟಿಪ್ಪಣಿಯ ವರದಿ ಸಹ ನೀಡಬೇಕಾಗಿತ್ತು.

ಹೀಗೆ ಜಿಲ್ಲೆಯ ಯಾವ ಹೋಬಳಿ, ಗ್ರಾಮಗಳಲ್ಲಿ ಸಮಸ್ಯೆಗಳು ಇವೆ ಎನ್ನುವುದನ್ನು ಅರಿತು ಪರಿಹಾರಕ್ಕೆ ಹೆಜ್ಜೆ ಇಡಲು ಈ ವರದಿ ಪ್ರಮುಖವಾಗುತ್ತದೆ. ಆದರೆ ಜಿಲ್ಲೆಯ ಬಹುತೇಕ ನೋಡಲ್ ಅಧಿಕಾರಿಗಳು ಹೋಬಳಿಗಳಿಗೆ ಭೇಟಿ ನೀಡಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-16-1802105678

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.