ಚಿಕ್ಕಬಳ್ಳಾಪುರ: ಪ್ಲೋರೈಡ್, ನೈಟ್ರೇಟ್, ಯುರೇನಿಯಂ...ಹೀಗೆ ಜಿಲ್ಲೆಯ ನೀರಿನಲ್ಲಿ ಈ ಅಂಶಗಳು ಇವೆ ಎನ್ನುವ ವಿಚಾರ ಆಗಾಗ್ಗೆ ಸದ್ದು ಮಾಡುತ್ತದೆ. ವಿವಿಧ ಅಧ್ಯಯನಗಳು ಸಹ ಜಿಲ್ಲೆಯ ಕೆಲವು ಕಡೆಗಳಲ್ಲಿ ಕುಡಿಯುವ ನೀರು ಕಲುಷಿತವಾಗಿದೆ ಎನ್ನುವುದನ್ನು ಸಾರುತ್ತದೆ.

ಈಗ ಜಿಲ್ಲೆಯಲ್ಲಿ ನಡೆದಿರುವ ಅಧ್ಯಯನ ವರದಿಗಳೇ ಇದನ್ನು ಮತ್ತೆ ಒತ್ತಿ ಹೇಳುತ್ತಿವೆ. ಈ ಹಿಂದಿನ ಮೂರು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ನೀರಿನ ಗುಣಮಟ್ಟದ ಪರೀಕ್ಷೆ ನಡೆಸಲಾಗಿದೆ. ಜಿಲ್ಲಾ ಪ್ರಯೋಗಾಲಯದಲ್ಲಿ ನೀರಿನ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದು ಇಲ್ಲಿ ನೀರಿನಲ್ಲಿ ಯಾವ ಅಂಶಗಳು ಇವೆ ಎನ್ನುವುದು ಪತ್ತೆಯಾಗಿದೆ.

ಜಿಲ್ಲೆಯ 1,274 ಗ್ರಾಮಗಳಲ್ಲಿ 12,847 ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 120 ಗ್ರಾಮಗಳಲ್ಲಿ ಕುಡಿಯುನ ನೀರು ಕಲುಷಿತವಾಗಿದೆ ಎನ್ನುವುದು ಪತ್ತೆಯಾಗಿದೆ. ಈ ಗ್ರಾಮಗಳ ನೀರು ಕುಡಿಯಲು ಯೋಗ್ಯವಲ್ಲ ಎನ್ನುವುದು ವರದಿಯಲ್ಲಿದೆ.

ನೀರಿನಲ್ಲಿ ರಾಸಾಯನಿಕ ಮತ್ತು ಬ್ಯಾಕ್ಟಿರಿಯಾಗಳು ಯಾವ ಪ್ರಮಾಣದಲ್ಲಿ ಇವೆ ಎನ್ನುವ ಮಾನದಂಡಗಳ ಅಡಿಯಲ್ಲಿ ಪ್ರಯೋಗಗಳನ್ನು ನಡೆಸಲಾಗಿದೆ.

ಈ ಹಿನ್ನೆಲೆಯಲ್ಲಿ ರಾಸಾಯನಿಕ, ಕಲುಷಿತ, ಗ್ರಾಮಗಳಲ್ಲಿ ಜನ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿ ಕುಡಿಯಲು ಮತ್ತು ಅಡುಗೆಗೆ ಶುದ್ಧ ಕುಡಿಯುವ ನೀರಿನ ಘಟಕಗಳ ನೀರನ್ನೇ ಕಡ್ಡಾಯವಾಗಿ ಬಳಸುವಂತೆ ಸೂಚಿಸಲಾಗುತ್ತಿದೆ. ಅಲ್ಲದೆ ಜಿಲ್ಲಾ ಪಂಚಾಯಿತಿ ಸಿಇಒ ಅವರು ಕುಡಿಯುವ ನೀರು ಕಲುಷಿತಗೊಳ್ಳುವುದನ್ನು ನಿಯಂತ್ರಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ಎಲ್ಲ ತಾ.ಪಂ ಇಒಗಳಿಗೆ, ಪಿಡಿಒಗಳಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-16-1622170034

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.