ಚಿಕ್ಕಬಳ್ಳಾಪುರ: ಯಾವುದೇ ಗ್ರಾಮದಲ್ಲಿ ಹೊಸದಾಗಿ ನೀರಿನ ಸಮಸ್ಯೆ ಎದುರಾದಲ್ಲಿ 24 ಗಂಟೆ ಒಳಗೆ ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದರು.

ತಮ್ಮ ಕಾರ್ಯ ವ್ಯಾಪ್ತಿಯ ಗ್ರಾಮಗಳಲ್ಲಿರುವ ಶುದ್ದ ನೀರಿನ ಘಟಕಗಳೆಷ್ಟು, ಅದರಲ್ಲಿ ಕಾರ್ಯನಿರ್ವಹಣೆಯಲ್ಲಿರುವುದು ಎಷ್ಟು ಮತ್ತು ದುರಸ್ತಿಗೆ ಬಂದಿರುವುದು ಎಷ್ಟು ಎಂಬುದರ ಬಗ್ಗೆ ಮಾಹಿತಿ ಪಡೆದು ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮವಹಿಸಬೇಕು ಎಂದರು.

ನಗರ ಪ್ರದೇಶದ ವಾರ್ಡ್ಗಳ ವ್ಯಾಪ್ತಿಯಲ್ಲಿ ಪ್ರತಿ ದಿನ ನೀರು ಪೂರೈಕೆ ಮಾಡಲು ಪ್ರಯತ್ನಿಸಬೇಕು. ಇಲ್ಲವಾದಲ್ಲಿ ವಾರಕ್ಕೆ ಕನಿಷ್ಠ ಎರಡು ಬಾರಿ ಆದರೂ ಪೂರೈಕೆ ಮಾಡಬೇಕು ಎಂದು ಹೇಳಿದರು.

ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗಬಾರದು. ಆದ್ಯತೆಯ ಕೆಲಸಗಳು ಎಂದು ಪರಿಗಣಿಸಿ ಕಾರ್ಯ ನಿರ್ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಹೋಬಳಿಗಳಿಗೆ ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಈ ನೋಡಲ್ ಅಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡುತ್ತಿದ್ದಾರೆ. ಸಮಸ್ಯೆ ನಿವಾರಣೆಗೆ ಗಮನ ಹರಿಸುತ್ತಿದ್ದಾರೆ. ಇದರಿಂದ ಸಮಸ್ಯೆಯು ಹತೋಟಿಯಲ್ಲಿದೆ ಎಂದು ಹೇಳಿದರು.

ಜಲಗಾರರು, ಪಿಡಿಒ, ತಾ.ಪಂ ಇಒ ಮತ್ತು ತಹಶೀಲ್ದಾರರ ಜೊತೆ ಸಮಲೋಚಿಸಿ ನೀರಿನ ಪೂರೈಕೆಯಲ್ಲಿ ವ್ಯತ್ಯ ಆಗದಂತೆ ಕ್ರಮವಹಿಸಬೇಕು ಎಂದು ಹೇಳಿದರು.

ಜಲಜೀವನ್ ಮಿಷನ್ ಅಭಿಯಾನದಡಿ ಜಿಲ್ಲೆಯಲ್ಲಿ ಈ ವರೆಗೆ ಎಷ್ಟು ಕೊಳವೆ ಬಾವಿಗಳನ್ನು ಕೊರೆಯಲಾಗಿದೆ, ಎಷ್ಟು ಯಶಸ್ವಿಯಾಗಿವೆ, ಎಷ್ಟು ವಿದ್ಯುತ್ ಸಂಪರ್ಕ ಪಡೆದಿವೆ. ವಿದ್ಯುತ್ ಸಂಪರ್ಕ ಪಡೆಯಲು ಎಷ್ಟು ಬಾಕಿ ಇವೆ ಎಂಬ ವಿವರವನ್ನು ನೀಡಬೇಕು. ವಿದ್ಯುತ್ ಸಂಪರ್ಕ ಪಡೆಯಲು ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಿ ಕೊಳವೆ ಬಾವಿ ನೀರು ಪೂರೈಕೆ ಸೇವೆಯನ್ನು ಜನರಿಗೆ ಮುಕ್ತಗೊಳಿಸಬೇಕು ಎಂದು ಈಗಾಗಲೇ ಸೂಚನೆ ನೀಡಿದ್ದರೂ ಪ್ರಗತಿ ಆಮೆ ಗತಿಯಲ್ಲಿ ಸಾಗುತ್ತಿದೆ. ಮುಂದಿನ ಸಭೆಯ ವೇಳೆಗೆ ಈ ಕಾರ್ಯ ಪೂರ್ಣವಾಗದಿದ್ದರೆ ಅಗತ್ಯ ಕಾನೂನು ಕ್ರಮ ಎದುರಿಸಲು ಸಿದ್ಧರಾಗಿ ಎಂದು ಬೆಸ್ಕಾಂ ಮತ್ತು ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ಗೆ ಎಚ್ಚರಿಕೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್. ಭಾಸ್ಕರ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅತಿಕ್ ಪಾಷಾ ಹಾಗೂ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-16-1134097140

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.