ಚಿಕ್ಕಬಳ್ಳಾಪುರ: ಹಿಂದೆಂದೂ ಕಂಡರಿಯದ ರೀತಿಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆರೋಗ್ಯ ಇಲಾಖೆಯವರು ಕಾಲಕಾಲಕ್ಕೆ ನೀಡಲಿರುವ ಮಾರ್ಗಸೂಚಿಗಳನ್ನು ಸಾರ್ವಜನಿಕರು ಪಾಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಗುರುವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.

ಹವಾಮಾನ ಇಲಾಖೆಯ ಪ್ರಕಾರ ರಾಜ್ಯದಲ್ಲಿ ಈ ವರ್ಷ ವಾಡಿಕೆ ಮಳೆಗಿಂತ ಕಡಿಮೆ ಪ್ರಮಾಣದ ಮಳೆ ಆಗಲಿದೆ. ಜಿಲ್ಲೆಯಲ್ಲಿ ವಾಡಿಕೆ ಮಳೆ ಆಗಬಹುದು ಎಂದು ಅಭಿಪ್ರಾಯಪಟ್ಟಿದೆ. ಮಳೆಯ ವೈಪರೀತ್ಯಗಳು ಏನೇ ಆದರೂ ನೀರು ಪೂರೈಕೆ ಹಾಗೂ ಇನ್ನಿತರ ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಕೊರೆದಿರುವ 313 ಕೊಳವೆ ಬಾವಿಗಳಿಗೆ ಒಂದೆರಡು ದಿನಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿ ಜನರಿಗೆ ನೀರು ಪೂರೈಸಲು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಕುಡಿಯುವ ನೀರಿನ ಪೂರೈಕೆಯ ತುರ್ತು ಕ್ರಮಕ್ಕಾಗಿ ರಾಜ್ಯ ಸರ್ಕಾರ ₹ 1.5 ಕೋಟಿಯನ್ನು ಜಿಲ್ಲೆಗೆ ಬಿಡುಗಡೆ ಮಾಡಿದೆ ಎಂದು ಹೇಳಿದರು.

ಕುಡಿಯುವ ನೀರಿನ ಉದ್ದೇಶಕ್ಕಾಗಿ ಅಗತ್ಯಕ್ಕೆ ತಕ್ಕಂತೆ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ಕಂದವಾರ ಮತ್ತು ಗೋಪಾಲಕೃಷ್ಣ ಅಮಾನಿಕರೆಗೆ ನಗರದ ಚರಂಡಿ ನೀರು ಸೇರುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ತಡೆಯಲು ಚಿಕ್ಕಬಳ್ಳಾಪುರ ನಗರಕ್ಕೆ ಪೂರ್ಣಪ್ರಮಾಣದಲ್ಲಿ ಒಳಚರಂಡಿ ವ್ಯವಸ್ಥೆ ನಿರ್ಮಿಸಲು ₹ 30 ಕೋಟಿ ಅನುದಾನ ಬಿಡುಗಡೆಯಾಗಿದೆ. ಈ ಕಾರ್ಯ ಟೆಂಡರ್ ಹಂತದಲ್ಲಿದೆ ಎಂದು ಮಾಹಿತಿ ನೀಡಿದರು.

ಫೆಬ್ರುವರಿಯಲ್ಲಿ 12, ಮಾರ್ಚ್ ನಲ್ಲಿ 23 ಗ್ರಾಮಗಳು, ಪ್ರಸ್ತುತ 31 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಖಾಸಗಿ ಕೊಳವೆ ಬಾವಿ ಮಾಲೀಕರ ಸಹಕಾರ ಪಡೆದು ನೀರು ಪೂರೈಸಲಾಗುತ್ತಿದೆ. ಮುಂದಿನ ದಿನಗಳಲ್ಲಿ 108 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂದು ಗುರ್ತಿಸಲಾಗಿದೆ. ಅದಕ್ಕೆ ತಕ್ಕಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್. ಮಂಜುಳಾ, ಶಾಸಕರಾದ ಸುಬ್ಬಾರೆಡ್ಡಿ, ಕೆ.ಎಚ್.ಪುಟ್ಟಸ್ವಾಮಿಗೌಡ, ಬಿ.ಎನ್.ರವಿಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಸೂರಜ್ ಹೆಗಡೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್, ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಚಿಂತಾಮಣಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಾಥ್, ಚಿಮುಲ್ ಅಧ್ಯಕ್ಷ ಮಂಜುನಾಥರೆಡ್ಡಿ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-16-816564089

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.