ಚಿಕ್ಕಬಳ್ಳಾಪುರ: ಯುವಕರು ದುಶ್ಚಟಕ್ಕೆ ಬಲಿ ಆಗದಂತೆ ತಮ್ಮನ್ನು ತಾವು ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಧೀಶ ಟಿ.ಪಿ. ರಾಮಲಿಂಗೇಗೌಡ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಂಬಾಕು ನಿಯಂತ್ರಣ ಕೋಶದ ಆಶ್ರಯದಲ್ಲಿ ತಾಲ್ಲೂಕಿನ ಬೀಡಗಾನಹಳ್ಳಿ ಬಳಿಯ ನಾಗಾರ್ಜುನ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ‘ವಿಶ್ವ ತಂಬಾಕು ರಹಿತ ದಿನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಹದಿಹರೆಯದ ವಯಸ್ಸಿನಲ್ಲಿ ದುಶ್ಚಟಗಳ ಪ್ರಭಾವಕ್ಕೆ ಬಲಿಯಾಗುವ ಸಾಧ್ಯತೆ ಹೆಚ್ಚಿದೆ. ಈ ವಯಸ್ಸಿನಲ್ಲಿ ಅತಿಹೆಚ್ಚು ಜಾಗರೂಕರಾಗಿರಬೇಕು. ಎಷ್ಟೇ ಕಠಿಣ ಕಾನೂನುಗಳಿದ್ದರೂ ವಿಶ್ವದಾದ್ಯಂತ ಸರಿಸುಮಾರು 80 ದಶ ಲಕ್ಷ ಜನ ತಂಬಾಕು ಸೇವನೆಯಿಂದ ಮೃತಪಡುತ್ತಿದ್ದಾರೆ. ಆದ್ದರಿಂದ ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪಾ, ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಬಹಳಷ್ಟು ಯುವ ಜನರು ಸಾಮಾಜಿಕ ಜಾಲತಾಣಗಳ ಆಕರ್ಷಣೆಗೆ ಬಲಿಯಾಗಿ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ. ಈ ರೀತಿಯ ವ್ಯಸನವು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕ. ಯಾವುದೇ ರೀತಿಯ ಮಾದಕ ವ್ಯಸನಗಳಿಗೆ ಬಲಿ ಆಗದಂತೆ ಪ್ರತಿಯೊಬ್ಬ ವಿದ್ಯಾರ್ಥಿಯು ಮನಸ್ಸನ್ನು ಕಾಪಾಡಿಕೊಳ್ಳಬೇಕು ಎಂದರು.

ತಮ್ಮ ಸುತ್ತಮುತ್ತ ಕಾನೂನು ಬಾಹಿರವಾದ ಚಟುವಟಿಕೆಗಳು ಕಂಡುಬಂದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಮಾಹಿತಿ ನೀಡಬೇಕು. ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್. ಮಹೇಶ್ ಕುಮಾರ್ ಮಾತನಾಡಿ, ಮೊಘಲರ ರಾಜ ಜಹಾಂಗೀರ್ ಕ್ರಿಸ್ತಶಕ 1,670 ರಲ್ಲಿ ಮೊದಲ ಬಾರಿಗೆ ತಂಬಾಕು ಸೇವನೆ ನಿಷೇಧಿಸಿದ್ದರು. 2016-17 ರ ಗ್ಯಾಟ್ಸ್ ಸಮೀಕ್ಷೆ ಪ್ರಕಾರ ಜಗತ್ತಿನಲ್ಲಿ ಶೇ 28.8 ರಷ್ಟು ತಂಬಾಕು ವ್ಯಸನಿಗಳಿದ್ದಾರೆ ಎಂದರು.

ಜಿಲ್ಲಾ ಆಸ್ಪತ್ರೆಯ ಕೊಠಡಿ ಸಂಖ್ಯೆ 72ರಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರವು ಕಾರ್ಯನಿರ್ವಹಿಸುತ್ತಿದೆ. ತಂಬಾಕು ಸೇವನೆಯನ್ನು ತ್ಯಜಿಸಲು ಉಚಿತವಾಗಿ ಆಪ್ತ ಸಮಾಲೋಚನೆ ಹಾಗೂ ಎನ್.ಆರ್. ಟಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ವಕೀಲರ ಸಂಘ ಅಧ್ಯಕ್ಷ ಕೆ.ವಿ.ಅಭಿಲಾಷ್, ದೇಶದ ಶಕ್ತಿ ಯುವಜನರು. ಬಲಿಷ್ಠ ರಾಷ್ಟ್ರದ ನಿರ್ಮಾಣಕ್ಕೆ ಯುವಜನರ ಕೊಡುಗೆ ಅಪಾರ. ಈ ನಿಟ್ಟಿನಲ್ಲಿ ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿರಲು ದುಶ್ಚಟಗಳಿಂದ ದೂರವಿರುವುದು ಅತ್ಯಗತ್ಯ ಎಂದು ತಿಳಿಸಿದರು.

ನಾಗಾರ್ಜುನ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ತಿಪ್ಪೇಸ್ವಾಮಿ ಮಾತನಾಡಿ, ಹದಿಹರೆಯದವರು ಸ್ನೇಹಿತರ ಪ್ರಭಾವಕ್ಕೊಳಗಾಗಿ ಅಥವಾ ತಮ್ಮ ಇಷ್ಟದ ನಟರನ್ನು ಅನುಕರಿಸಲು ಈ ವ್ಯಸನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತುತ್ತಾಗುತ್ತಿದ್ದಾರೆ. ಹಲವರು ವಿದ್ಯಾರ್ಥಿ ಜೀವನದಲ್ಲಿಯೇ ಮಾದಕ ವ್ಯಸನಕ್ಕೆ ಬಲಿ ಆಗುತ್ತಿದ್ದಾರೆ. ಮಾನಸಿಕ, ದೈಹಿಕ ಒತ್ತಡವಿದ್ದಲ್ಲಿ 14416 ಟೆಲಿ ಮನಸ್ ಸಂಖ್ಯೆಗೆ ಕರೆ ಮಾಡಿ ಉಚಿತವಾಗಿ ಆಪ್ತಸಮಾಲೋಚನೆ ಪಡೆಯಬಹುದು ಎಂದರು.

ಕಾರ್ಯಕ್ರಮಕ್ಕೂ ತಂಬಾಕು ಸೇವೆನ ದುಷ್ಪರಿಣಾಮಗಳ ಬಗ್ಗೆ ತಿಳಿಸುವ ಕರಪತ್ರ, ಭಿತ್ತಿ ಚಿತ್ರಗಳನ್ನು ಬಿಡುಗಡೆಗೊಳಿಸಲಾಯಿತು. ಕಾಲೇಜಿನ ಅವರಣದಲ್ಲಿ ಗಿಡ ನೆಡಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-16-2096117788

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.