ಚಿಕ್ಕಬಳ್ಳಾಪುರ: ಯುವನಿಧಿ ಯೋಜನೆಯು ಯುವ ಸಮೂಹಕ್ಕೆ ವರವಾಗಿದೆ. ಜಿಲ್ಲೆಯ ಶೇ 98.13 ರಷ್ಟು ಅರ್ಹ ಉದ್ಯೋಗಕಾಂಕ್ಷಿಗಳನ್ನು ಯೋಜನೆಯಡಿ ನೋಂದಾಯಿಸಿ ಸವಲತ್ತು ನೀಡಲಾಗುತ್ತಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್ ತಿಳಿಸಿದರು.

ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ಜಿಲ್ಲಾ ಮತ್ತು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಆಯೋಜಿಸಿದ್ದ ‘ಯುವನಿಧಿ ಅರಿವು ಕಾರ್ಯಾಗಾರ’ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ ಅರ್ಹರಿರುವ 6,200 ಅಭ್ಯರ್ಥಿಗಳ ಪೈಕಿ 6,084 ಅಭ್ಯರ್ಥಿಗಳನ್ನು (ಶೇ.98.13 ರಷ್ಟು) ನೋಂದಾಯಿಸಲಾಗಿದೆ. ಈ ಪೈಕಿ 5,058 ಅಭ್ಯರ್ಥಿಗಳಿಗೆ ಆರ್ಥಿಕ ಸವಲತ್ತು ಬಿಡುಗಡೆ ಮಾಡಿ ಶೇ 83.14 ಸಾಧನೆ ಮಾಡಲಾಗಿದೆ. ಬಾಕಿ ಉಳಿದಿರುವ ಅಭ್ಯರ್ಥಿಗಳಿಗೂ ಆರ್ಥಿಕ ಸೌಲಭ್ಯ ವಿತರಿಸಲು ಕ್ರಮ ವಹಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಈವರೆಗೆ ₹13.71 ಕೋಟಿ ಹಣವನ್ನು ಡಿಬಿಟಿ ಮುಖಾಂತರ ಅರ್ಹ ಉದ್ಯೋಗಾಕಾಂಕ್ಷಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಅನಿವಾರ್ಯ ಕಾರಣಗಳಿಂದ ಈವರೆಗೆ ಯಾವುದೇ ಅರ್ಹ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿದ್ದಲ್ಲಿ ಸಂಬಂಧಪಟ್ಟವರನ್ನು ಸಂಪರ್ಕಿಸಿ ನೋಂದಾಯಿಸಿಕೊಂಡು ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ದಾಖಲಾಗಿರುವ ವಿದ್ಯಾರ್ಥಿಗಳು ಶೇ 90 ರಷ್ಟು ಗ್ರಾಮೀಣ ಭಾಗದವರಾಗಿದ್ದಾರೆ. ಬಡ ಮತ್ತು ಮಧ್ಯಮ ವರ್ಗದ ಕುಟುಂಬದ ಹಿನ್ನೆಲೆ ಹೊಂದಿದ್ದಾರೆ. ಈ ವಿದ್ಯಾರ್ಥಿಗಳ ಪೈಕಿ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಂದೆ ತಾಯಿಯನ್ನು ಕಳೆದುಕೊಂಡಿದ್ದಾರೆ ಎಂದರು.

ಈ ವಿದ್ಯಾರ್ಥಿಗಳ ಕಾಲೇಜಿನ ಶುಲ್ಕವನ್ನು ವೈಯಕ್ತಿಕವಾಗಿ ಭರಿಸಲು ಇಚ್ಚಿಸಿದ್ದೇನೆ. ಪ್ರಾಂಶುಪಾಲರು ಆ ವಿದ್ಯಾರ್ಥಿಗಳ ಪಟ್ಟಿ ಹಾಗೂ ಏಕ ಪೋಷಕ ಮಕ್ಕಳ ವಿವರ ನೀಡಬೇಕು ಎಂದು ಮನವಿ ಮಾಡಿದರು. .

ಜಿಲ್ಲಾ ಉದ್ಯೋಗಾಧಿಕಾರಿ ಪ್ರಸಾದ್ ಎಂ. ಮಾತನಾಡಿ, ಪ್ರತಿಯೊಬ್ಬ ಯುವಕ ಯುವತಿಯರು ದುಡಿಯುವಂತಾಗಬೇಕು ಎಂದು ರಾಜ್ಯ ಸರ್ಕಾರ ಉದ್ದೇಶಿಸಿ ಕೌಶಲ ಅಭಿವೃದ್ಧಿ ಇಲಾಖೆಯಡಿ ಹಲವು ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಅವುಗಳ ಸದುಪಯೋಗವನ್ನು ಪಡೆಯಲು ಹಾಗೂ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಮತ್ತು ಸಂದರ್ಶನಕ್ಕೆ ಹಾಜರಾಗಲು ಯುವನಿಧಿ ಹಣ ಉಪಯೋಗಕ್ಕೆ ಬರುತ್ತಿರುವುದು ಕಂಡುಬರುತ್ತಿದೆ ಎಂದರು.

ಚಿಕ್ಕಬಳ್ಳಾಪುರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಜಯರಾಮ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಯುವನಿಧಿ ಯೋಜನೆ, ಉದ್ಯೋಗ ಮೇಳ, ಉದ್ಯೋಗ ಪತ್ರ, ಸ್ಟಡಿ ಸರ್ಕಲ್, ಯುವನಿಧಿ ಪ್ಲಸ್ ಕುರಿತ ಭಿತ್ತಿಪತ್ರಗ ಮತ್ತು ಕರಪತ್ರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಜಾಗೃತಿ ಮೂಡಿಸಲಾಯಿತು.

ಪ್ರಾಂಶುಪಾಲ ಚಂದ್ರಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ನಾರಾಯಣಸ್ವಾಮಿ, ಲಕ್ಷ್ಮಣ್, ವೆಂಕಟಲಕ್ಷ್ಮಮ್ಮ, ಬಾಲಕೃಷ್ಣ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-16-852820896

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.