ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ ನಿರ್ಮೂಲನೆಗೆ ಅರಿವು ಅಗತ್ಯ

Last Updated 3 ಆಗಸ್ಟ್ 2019, 11:39 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆಯುತ್ತಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸಾರ್ವಜನಿಕರಲ್ಲಿ ಗ್ರಾಹಕರ ಹಕ್ಕು ಮತ್ತು ಕಾಯ್ದೆಗಳ ಬಗ್ಗೆ ಅರಿವು ಮೂಡಿಸಲಾಗುವುದು’ ಎಂದು ಅಖಿಲ ಭಾರತ ಭ್ರಷ್ಟಾಚಾರ ನಿರ್ಮೂಲನ ಮತ್ತು ಗ್ರಾಹಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಂಪಗಿ ಶ್ರೀನಿವಾಸ್ ತಿಳಿಸಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭ್ರಷ್ಟಾಚಾರವನ್ನು ವೈಯಕ್ತಿಕ ನೆಲೆಗಟ್ಟಿನಲ್ಲಿ ನಿರ್ನಾಮ ಮಾಡಬೇಕು ಎಂದು ಪ್ರತಿಯೊಬ್ಬರೂ ಸಂಕಲ್ಪ ಮಾಡಿದಾಗ ಮಾತ್ರ ಅದರ ನಿರ್ಮೂಲನೆ ಸಾಧ್ಯ. ಹೀಗಾಗಿ, ಭ್ರಷ್ಟಾಚಾರದ ವಿರುದ್ಧ ಶಿಕ್ಷಣದ ಮೂಲಕ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಯುವ ಜನರು ಅಕ್ರಮಗಳನ್ನು ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.

ಸಂಘದ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಲಾಯಿತು. ಸಂಘದ ಸಂಸ್ಥಾಪಕ ಅಧ್ಯಕ್ಷ ವಂದೇ ಮಾತರಂ ಸುಧಾಕರ್, ರಾಜ್ಯ ಸಂಯೋಜಕ ಕೆ.ವಿ ಬಾಲಕೃಷ್ಣ, ಚಂದ್ರು, ರಾಜ್ಯ ಸಮಿತಿ ಸದಸ್ಯ ಜಿ.ರವಿಕುಮಾರ್, ಜಿಲ್ಲಾ ಘಟಕದ ಜಂಟಿ ಕಾರ್ಯದರ್ಶಿ ಪ್ರದೀಪ್ ಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT