ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಬಾಗೇಪಲ್ಲಿ | ಶಾಲಾ ಆರಂಭ: ಪಠ್ಯಪುಸ್ತಕ, ಸಮವಸ್ತ್ರ ವಿತರಣೆ

Published : 30 ಮೇ 2025, 14:27 IST
Last Updated : 30 ಮೇ 2025, 14:27 IST
ಫಾಲೋ ಮಾಡಿ
0
ಬಾಗೇಪಲ್ಲಿ | ಶಾಲಾ ಆರಂಭ: ಪಠ್ಯಪುಸ್ತಕ, ಸಮವಸ್ತ್ರ ವಿತರಣೆ
ಬಾಗೇಪಲ್ಲಿ ತಾಲ್ಲೂಕಿನ ಗೂಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವದಲ್ಲಿ ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಲಾಯಿತು

ಗೂಳೂರು(ಬಾಗೇಪಲ್ಲಿ): ತಾಲ್ಲೂಕಿನ ಗೂಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಿ ಸಿಹಿ ತಿನ್ನಿಸಿ ಸ್ವಾಗತಿಸಿದರು.

ADVERTISEMENT
ADVERTISEMENT

ಎಸ್.ಎಸ್.ರಮೇಶಬಾಬು ಮಾತನಾಡಿ, ಬೇಸಿಗೆ ರಜೆ ಮುಗಿದು ಶಾಲೆ ಪ್ರಾರಂಭ ಆಗಿದೆ. ಪೋಷಕರು ಮಕ್ಕಳನ್ನು ಮನೆಯಲ್ಲಿ ಇರಿಸಿಕೊಳ್ಳದೆ ಶಾಲೆಗೆ ಕಳುಹಿಸಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಅಕ್ಷರಮಾಲೆ, ಕಾಗುಣಿತ, ಅಂಕಿಗಳು, ಮಗ್ಗಿ ಹೇಳಿಕೊಡಬೇಕು. ಓದುವ, ಬರೆಯುವ ಹವ್ಯಾಸವನ್ನು ಮಕ್ಕಳಿಗೆ ಕಲಿಸಬೇಕು. ಹಿಂದಿನ ಫಲಿತಾಂಶಕ್ಕಿಂತ, ಶೈಕ್ಷಣಿಕ ವರ್ಷದಲ್ಲಿ ಶೇಕಡಾವಾರು ಫಲಿತಾಂಶ ಹೆಚ್ಚಾಗಬೇಕು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ ಮಾತನಾಡಿ, ಶಿಕ್ಷಕ, ಶಿಕ್ಷಕಿಯರು ಸರ್ಕಾರಿ ಶಾಲೆಗಳ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಬೇಕಾಗಿದೆ. ಎಲ್ಲಾ ಮಕ್ಕಳು ಕಲಿಕೆಯಲ್ಲಿ ಮುಂದಾಗಬೇಕು. ಮಕ್ಕಳಿಗೆ ಉಚಿತವಾಗಿ ಪಠ್ಯಪುಸ್ತಕ, ಸಮವಸ್ತ್ರ, ಬಿಸಿಯೂಟ, ಹಾಲು, ಮೊಟ್ಟೆ, ವಿದ್ಯಾರ್ಥಿ ವೇತನ ನೀಡಲಾಗಿದೆ. ಕಳೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ನಿರೀಕ್ಷೆ ಮಾಡಿದಷ್ಟು ಬಂದಿಲ್ಲ. ಇದರಿಂದ ಪ್ರಸಕ್ತ ಸಾಲಿನಲ್ಲಿ ಮೊದಲಿನಿಂದಲೇ ಎಲ್ಲ ಮಕ್ಕಳಿಗೆ ಉತ್ತಮವಾಗಿ ಬೋಧಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಸರ್ಕಾರಿ ಪ್ರೌಢಶಾಲಾ ಹಾಗೂ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಗಣ್ಯರು ಪಠ್ಯಪುಸ್ತಕ, ಸಮವಸ್ತ್ರ ವಿತರಿಸಿದರು. ಗೂಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಸ್.ಜಿ.ಶಂಕರನಾಯಕ್, ಪಿಡಿಒ ಕೃಷ್ಣಮೂರ್ತಿ, ಮುಖ್ಯಶಿಕ್ಷಕ ವಿ.ವೆಂಕಟೇಶ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ರಂಗನಾಥ್, ಶಿಕ್ಷಣ ಅಧಿಕಾರಿ ಶಿವಪ್ಪ, ವೆಂಕಟೇಶ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಇನಾಯುತುಲ್ಲಾಖಾನ್, ಸತ್ಯನಾರಾಯಣರಾವ್, ತ್ಯಾಗರಾಜ್, ನಯಾಜ್‍ಪಾಷ, ಪಿ.ಟಿ.ಸುಮಲತ, ಎಸ್.ರಷೀದಾ, ಆರ್.ಪೂರ್ಣಿಮಾ, ಅರುಣಮ್ಮ, ನಾಗಜ್ಯೋತಿ, ಎಲ್.ಪೂರ್ಣಿಮಾ, ಕೆ.ಎ.ಶ್ವೇತ, ವೀಣಾ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
Comments0