ಬಾಗೇಪಲ್ಲಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮಿತಿ ಮೀರಿರುವ ಭ್ರಷ್ಟಾಚಾರದ ವಿರುದ್ಧ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹೋರಾಟ ರೂಪಿಸಲಾಗುವುದು ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಭಾನುವಾರ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂದಾಯ, ಅಬಕಾರಿ ಸೇರಿದಂತೆ ವಿವಿಧ ಇಲಾಖೆ, ನಿಗಮಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಭೂ ಹಗರಣಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಕೋಟ್ಯಂತರ ಹಣ ಭ್ರಷ್ಟಾಚಾರ ಮಾಡಿದೆ. ಕೋಟ್ಯಂತರ ತೆರಿಗೆ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.

ಕಂದಾಯ ಸಚಿವರೇ ತಮ್ಮ ಇಲಾಖೆಯ ಅಧಿಕಾರಿಗಳ ಭ್ರಷ್ಟಾಚಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಬಕಾರಿ ಇಲಾಖೆ ಸಚಿವರು ಭ್ರಷ್ಟಾಚಾರ ಹಗರಣದಲ್ಲಿ ಶಾಮೀಲಾಗಿರುವ ಆರೋಪ ಕೇಳಿ ಬಂದಿದೆ. ಈ ಎಲ್ಲಾ ಹಗರಣಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಕಾಂಗ್ರೆಸ್ ಅಧಿಕಾರದಲ್ಲಿರಲು ನೈತಿಕತೆ ಇಲ್ಲ. ಸರ್ಕಾರದ ಈ ಎಲ್ಲಾ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಬೀದಿಗಿಳಿದು ಬೃಹತ್ ಹೋರಾಟ ನಡೆಸಲಿದೆ ಎಂದರು.

ಪಿ.ಸಾಯಿಕುಮಾರ್, ಸಂದೀಪ್ ರೆಡ್ಡಿ, ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಸದಸ್ಯೆ ನಿರ್ಮಲಮ್ಮ, ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಚಂದ್ರಮೋಹನ್, ಮಂಜುನಾಥ್, ಟಿ.ರಾಮಪ್ಪ, ಎಲ್.ಭಾಸ್ಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.