ನಂಬರ್ ಪ್ಲೇಟ್ ಇಲ್ಲದ ಟ್ರ್ಯಾಕ್ಟರ್ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯೇ ಅಪಘಾತಕ್ಕೆ ಕಾರಣವಾಗಿದೆ. ಯಾವುದೇ ಮುನ್ಸೂಚನೆ ನೀಡದ ಟ್ರ್ಯಾಕ್ಟರ್ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಹಿಂಬದಿಯಿಂದ ಬರುತ್ತಿದ್ದ ಬೈಕ್, ಟ್ರ್ಯಾಕ್ಟರ್ ಹಿಂಭಾಗದ ಟ್ರಾಲಿಗೆ ಡಿಕ್ಕಿ ಹೊಡೆದಿದೆ. ಸವಾರನ ತಲೆಗೆ ತೀವ್ರ ಪೆಟ್ಟುಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಆನಂದ್ ಸೋದರ ಪ್ರಸಾದ್ ಗ್ರಾಮಾಂತರ ಠಾಣೆಗೆ ದೂರು ಸಲ್ಲಿಸಿದ್ದಾರೆ.