ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಗೇಪಲ್ಲಿ | ರಾಜ್ಯಪಾಲರ ಕ್ರಮದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ರಾಜಭವನವನ್ನು ರಾಜಕೀಯ ಭವನ ಮಾಡಿದ ಆರೋಪ
Published : 20 ಆಗಸ್ಟ್ 2024, 12:56 IST
Last Updated : 20 ಆಗಸ್ಟ್ 2024, 12:56 IST
ಫಾಲೋ ಮಾಡಿ
Comments

ಬಾಗೇಪಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿಗೆ ನೀಡಿದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಕ್ರಮ ಖಂಡಿಸಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳವಾರ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.

ಪಟ್ಟಣದ ಡಾ.ಎಚ್.ಎನ್.ವೃತ್ತದಿಂದ ಹೊರಟ ಪ್ರತಿಭಟನಾಕಾರರು ಮುಖ್ಯರಸ್ತೆಯಲ್ಲಿ ಸಂಚರಿಸಿ, ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ನರೇಂದ್ರ ಮಾತನಾಡಿ, ‘40 ವರ್ಷಗಳ ರಾಜಕೀಯದ ಅನುಭವದಲ್ಲಿ ಸಿದ್ದರಾಮಯ್ಯರವರ ಮೇಲೆ ಕಪ್ಪು ಚುಕ್ಕೆ ಇಲ್ಲ. ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಖಂಡನೀಯ.  ಕೇಂದ್ರ ಬಿಜೆಪಿ ರಾಜ್ಯಪಾಲರ ಮೂಲಕ ಪ್ರಜಾಪ್ರಭುತ್ವದ ರೀತಿಯಲ್ಲಿ ಆಯ್ಕೆ ಆದ ಸರ್ಕಾರವನ್ನು ಅಸ್ಥಿರಗೊಳಿಸಲು, ಸಿದ್ದರಾಮಯ್ಯರ ಮೇಲೆ ಕಪ್ಪು ಚುಕ್ಕೆ ತರಲು ಯತ್ನಿಸಿದೆ. ಬಿಜೆಪಿಯ ಕನಸು ನನಸು ಆಗುವುದಿಲ್ಲ’ ಎಂದು ತಿಳಿಸಿದರು.

‘ಹಿಂದಿನ ಬಿಜೆಪಿ ಆಡಳಿತದಲ್ಲಿ, ಅನೇಕ ಹಗರಣ, ಭಾರಿ ಭ್ರಷ್ಟಾಚಾರ ನಡೆದಿವೆ. ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗಿದ್ದಾರೆ. ಇವರ ಪೋಕ್ಸೋ ಪ್ರಕರಣ ಇದೆ. ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರ ಮೇಲೆ ಅನೇಕ ಅಪರಾಧ ಪ್ರಕರಣ ಇವೆ. ಮೊದಲು ಬಿಜೆಪಿ ನಾಯಕರು ರಾಜೀನಾಮೆ ನೀಡಲಿ’ ಎಂದರು.

ಕಾಂಗ್ರೆಸ್ ಮುಖಂಡ ಪಿ.ಮಂಜುನಾಥರೆಡ್ಡಿ ಮಾತನಾಡಿ, ‘ಕೇಂದ್ರ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಾಜ್ಯಪಾಲರ ಮೂಲಕ ರಾಜ್ಯದ ಜನಪರ ಸರ್ಕಾರವನ್ನು ಅತಂತ್ರ ಮಾಡಲು ಹೊರಟಿದೆ. ಬಿಜೆಪಿಯವರ ಆಟ, ಕಾಂಗ್ರೆಸ್ ಮುಂದೆ ನಡೆಯಲ್ಲ. ಬಿಜೆಪಿಯವರು ಹಗರಣ, ಭ್ರಷ್ಟಾಚಾರ ರಹಿತರಾಗಿದ್ದಾರಾ?’ ಎಂದು ಪ್ರಶ್ನಿಸಿದರು.

ಶಿರಸ್ತೆದಾರ್ ಮಂಜುನಾಥ್ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೋಮಶೇಖರ್, ಮಹಿಳಾ ಕಾಂಗ್ರೆಸ್‌ನ ನಜೀರಾಬೇಗಂ, ಟಿ.ವಿ.ಸುಮಂಗಳ, ಬೀಬೀಜಾನ್, ಬೂರಗಮಡುಗುಮನರಸಿಂಹಪ್ಪ, ಎ.ವಿ.ಪೂಜಪ್ಪ, ತೋಳ್ಳಪಲ್ಲಿ ಶ್ರೀನಿವಾಸ್, ಬಿ.ವಿ.ವೆಂಕಟರವಣ, ಕೆಎನ್‌ಎಸ್‌ ಕೃಷ್ಣಪ್ಪ, ಗೂಳೂರು ಬಾಬು, ಕೋಟಪ್ಪ, ನೂರುಲ್ಲಾ, ನಿಜಾಮುದ್ದೀನ್, ಮನ್ಸೂರ್, ಎ.ನಂಜುಂಡಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT