ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಕೋವಿಡ್ ಸೋಂಕಿತರು 20ಕ್ಕೆ ಏರಿಕೆ

Last Updated 2 ಮೇ 2020, 7:52 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ನಗರದ 17ನೇ ವಾರ್ಡ್‌ ನ 54 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್ 19 ತಗುಲಿರುವುದು ಶನಿವಾರ ದೃಢಪಟ್ಟಿದ್ದು, ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

ನಗರದಲ್ಲಿ ಕೋವಿಡ್ ಗೆ ತುತ್ತಾಗಿದ್ದ 17ನೇ ವಾರ್ಡ್ ವ್ಯಾಪ್ತಿಯ ಅಂಜುಮನ್ ರಸ್ತೆಯ ನಿವಾಸಿ, 69 ವರ್ಷದ ವ್ಯಕ್ತಿಯೊಬ್ಬರು ಏಪ್ರಿಲ್ 15ರಂದು ಮೃತಪಟ್ಟಿದ್ದರು. ಅವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿ ಶನಿವಾರದವರೆಗೆ 17ನೇ ವಾರ್ಡ್‌ ನ ಆರು ಜನರಿಗೆ ಸೋಂಕು ತಗುಲಿದ್ದು‌ ಜಿಲ್ಲಾ ಕೇಂದ್ರದಲ್ಲಿ‌ ತಲ್ಲಣ ಮೂಡಿಸಿದೆ.

ಈ‌ ನಡುವೆಯೇ ಏಪ್ರಿಲ್ 25 ರಂದು ನಗರದ 20 ನೇ ವಾರ್ಡ್ ನಿವಾಸಿ, 18 ವರ್ಷದ ಯುವಕನೊಬ್ಬನಿಗೆ ಕೋವಿಡ್ ತಗಲಿರುವುದು ಪತ್ತೆಯಾಗಿತ್ತು.

ಜಿಲ್ಲೆಯಲ್ಲಿ ಈವರೆಗೆ ಗೌರಿಬಿದನೂರಿನ 12, ಚಿಕ್ಕಬಳ್ಳಾಪುರದ 8 ಜನರು ಸೇರಿದಂತೆ 20 ಮಂದಿಯಲ್ಲಿ ಕೋವಿಡ್‌ ಪತ್ತೆಯಾಗಿದೆ.

ಈ ಪೈಕಿ ಇಬ್ಬರು (ಗೌರಿಬಿದನೂರು, ಚಿಕ್ಕಬಳ್ಳಾಪುರದ ತಲಾ ಒಬ್ಬರು) ಮೃತಪಟ್ಟಿದ್ದಾರೆ. ಉಳಿದಂತೆ ಗೌರಿಬಿದನೂರಿನ 11 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಸದ್ಯ ಜಿಲ್ಲಾ ಆಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ ಏಳು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ ಗುಣಮುಖರಾಗಿರುವ ಮೂರು ಜನರನ್ನು ಶನಿವಾರ ಬಿಡುಗಡೆಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT