ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ವೈದ್ಯನಿಗೆ ಕೋವಿಡ್, ಆಸ್ಪತ್ರೆ ಸೀಲ್‌ಡೌನ್‌

ಶನಿವಾರ ಜಿಲ್ಲೆಯಲ್ಲಿ 12 ಪ್ರಕರಣಗಳು ವರದಿ, 245ಕ್ಕೆ ಏರಿದ ಸೋಂಕಿತರ ಸಂಖ್ಯೆ
Last Updated 4 ಜುಲೈ 2020, 14:39 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶನಿವಾರ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಸೇರಿದಂತೆ 12 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 245ಕ್ಕೆ ಏರಿಕೆಯಾಗಿದೆ.

ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ 37 ವರ್ಷದ ವೈದ್ಯರೊಬ್ಬರಿಗೆ ಕೋವಿಡ್‌ ತಗುಲಿರುವುದು ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಬೆಚ್ಚಿ ಬೀಳಿಸಿದೆ.

ವೈದ್ಯರಿಗೆ ಕೋವಿಡ್‌ ಸೋಂಕಿರುವುದು ಪತ್ತೆಯಾಗುತ್ತಿದ್ದಂತೆ ವೈರಸ್‌ ನಾಶಕ ದ್ರಾವಣ ಸಿಂಪಡಿಸಿ ಸರ್ಕಾರಿ ಆಸ್ಪತ್ರೆಯನ್ನು ಸೀಲ್‌ಡೌನ್‌ ಮಾಡಲಾಯಿತು. ಸಾರ್ವಜನಿಕರ ಸೇವೆಗಾಗಿ ಆರೋಗ್ಯ ಇಲಾಖೆ ಚಿಂತಾಮಣಿಯ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಿದೆ.

ಇತ್ತೀಚೆಗಷ್ಟೇ ದಿಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್‌ವೊಬ್ಬರಲ್ಲಿ ಕೋವಿಡ್‌ ಪತ್ತೆಯಾದಾಗಲೇ ಆರೋಗ್ಯ ಇಲಾಖೆ ಸಿಬ್ಬಂದಿ ಬೆಚ್ಚಿದ್ದರು, ಇದೀಗ ವೈದ್ಯರು ಕೋವಿಡ್‌ಗೆ ತುತ್ತಾಗಿರುವುದು ಮತ್ತಷ್ಟು ಭೀತಿ ಹೆಚ್ಚಲು ಕಾರಣವಾಗಿದೆ.

ಶನಿವಾರ ಶಿಡ್ಲಘಟ್ಟ ತಾಲ್ಲೂಕಿನ ನಾಲ್ಕು, ಗೌರಿಬಿದನೂರು ಮತ್ತು ಚಿಂತಾಮಣಿ ತಾಲ್ಲೂಕುಗಳಲ್ಲಿ ತಲಾ ಮೂರು, ಬಾಗೇಪಲ್ಲಿ ಮತ್ತು ಚಿಕ್ಕಬಳ್ಳಾಪುರ ತಾಲ್ಲೂಕುಗಳಲ್ಲಿ ತಲಾ ಒಂದು ಕೋವಿಡ್‌ ಪ್ರಕರಣಗಳು ವರದಿಯಾಗಿವೆ.

ಈವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 54, ಬಾಗೇಪಲ್ಲಿ 4, ಚಿಂತಾಮಣಿ 21, ಗೌರಿಬಿದನೂರು 100, ಶಿಡ್ಲಘಟ್ಟ ತಾಲ್ಲೂಕಿನಲ್ಲಿ 16 ಜನರಿಗೆ ಕೋವಿಡ್ ಸೋಂಕು ತಗುಲಿದೆ.

ಸೋಂಕಿತರ ಪೈಕಿ ನಾಲ್ಕು ಮಂದಿ ಕೋವಿಡ್‌ನಿಂದ, ಇಬ್ಬರು ವಿವಿಧ ಕಾಯಿಲೆಗಳಿಂದ ಮೃತಪಟ್ಟಿದ್ಧಾರೆ. ಚಿಕಿತ್ಸೆಯಿಂದ 177 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್‌ ವಾರ್ಡ್‌ನಲ್ಲಿ 61 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT