ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

Last Updated 5 ಸೆಪ್ಟೆಂಬರ್ 2020, 6:31 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: 2020-21 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಾಗಿ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದಿಂದ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗ: ಬಾಗೇಪಲ್ಲಿ ತಾಲ್ಲೂಕಿನ ಅಬಕವಾರಿಪಲ್ಲಿ ಸ.ಕಿ.ಪ್ರಾ.ಶಾಲೆಯ ಮಹಮ್ಮದ್ ಜಬೀವುಲ್ಲಾ, ಚಿಕ್ಕಬಳ್ಳಾಪುರ ತಾಲ್ಲೂಕಿನ ನೆಲಮಾಕನಹಳ್ಳಿ ಸ.ಕಿ.ಪ್ರಾ.ಶಾಲೆಯ ಟಿ.ರಾಧಾಮಣಿ, ಚಿಂತಾಮಣಿ ತಾಲ್ಲೂಕಿನ ಶಾಂತಿನಗರ ಸ.ಕಿ.ಪ್ರಾ.ಶಾಲೆಯ ಸಹ ಶಿಕ್ಷಕ ಎನ್.ನಾಗರಾಜ, ಗೌರಿಬಿದನೂರು ತಾಲ್ಲೂಕಿನ ದ್ರೋಣಕುಂಟೆ ಸ.ಕಿ.ಪ್ರಾ.ಶಾಲೆಯ ಡಿ.ಪಿ.ಚಂದ್ರಕಲಾ, ಗುಡಿಬಂಡೆ ತಾಲ್ಲೂಕಿನ ಮರವೇನಹಳ್ಳಿ ಸ.ಕಿ.ಪ್ರಾ.ಶಾಲೆಯ ರಾಜಶೇಖರರೆಡ್ಡಿ, ಶಿಡ್ಲಘಟ್ಟ ತಾಲ್ಲೂಕಿನ ಹಿರೇಬಲ್ಲ ಸ.ಕಿ.ಪ್ರಾ.ಶಾಲೆಯ ಮನೋರ್ ಮಣಿ ಆಯ್ಕೆಯಾಗಿದ್ದಾರೆ.

ಹಿರಿಯ ಪ್ರಾಥಮಿಕ ಶಾಲಾ ವಿಭಾಗ: ಬಾಗೇಪಲ್ಲಿ ತಾಲ್ಲೂಕಿನ ಆಚೇಪಲ್ಲಿ ಸ.ಹಿ.ಪ್ರಾ.ಶಾಲೆಯ ಸಿ.ರಾಮರೆಡ್ಡಿ, ಸಿ, ಚಿಕ್ಕಬಳ್ಳಾಪುರ ತಾಲ್ಲೂಕಿನ ನಾಯನಹಳ್ಳಿ ಸ.ಹಿ.ಪ್ರಾ.ಶಾಲೆಯ ಲಕ್ಷ್ಮೀನಾರಾಯಣ, ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಸ.ಹಿ.ಪ್ರಾ.ಶಾಲೆಯ ಶ್ರೀನಿವಾಸ, ಗೌರಿಬಿದನೂರು ತಾಲ್ಲೂಕಿನ ಸಾದೇನಹಳ್ಳಿ ಸ.ಹಿ.ಪ್ರಾ.ಶಾಲೆಯ ಸುಜಾತ, ಗುಡಿಬಂಡೆ ತಾಲ್ಲೂಕಿನ ವರ್ಲಕೊಂಡ ಸ.ಹಿ.ಪ್ರಾ.ಶಾಲೆಯ ಅಶ್ವತ್ಥಪ್ಪ, ಶಿಡ್ಲಘಟ್ಟ ತಾಲ್ಲೂಕಿನ ಮುತ್ತೂರು ಸ.ಹಿ.ಪ್ರಾ.ಶಾಲೆಯ ದಾವೂದ್ ಪಾಷಾ ಆಯ್ಕೆಯಾಗಿದ್ದಾರೆ.

ಪ್ರೌಢ ಶಾಲಾ ವಿಭಾಗ: ಬಾಗೇಪಲ್ಲಿ ತಾಲ್ಲೂಕಿನ ಬಿಳ್ಳೂರು ಸರ್ಕಾರಿ ಪ್ರೌಢಶಾಲೆಯ ಎನ್.ಆರ್.ಕುಮಾರ್, ಚಿಕ್ಕಬಳ್ಳಾಪುರ ತಾಲ್ಲೂಕಿನ ದಿಬ್ಬೂರು ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಎನ್.ಆರ್.ಸಂತೋಷ್, ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಸರ್ಕಾರಿ ಪ್ರೌಢಶಾಲೆಯ ಸತ್ಯಭಾಮ, ಗೌರಿಬಿದನೂರು ತಾಲ್ಲೂಕಿನ ನಕ್ಕಲಹಳ್ಳಿ ಸರ್ಕಾರಿ ಪ್ರೌಢಶಾಲೆಯ ಎಚ್.ಎನ್.ಪವನ್ ಕುಮಾರ್, ಗುಡಿಬಂಡೆ ತಾಲ್ಲೂಕಿನ ಚೆಂಡೂರು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಡಿ.ಶಶಿಕಲಾ, ಶಿಡ್ಲಘಟ್ಟ ತಾಲ್ಲೂಕಿನ ತುಮ್ಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಎಸ್.ಮಾಲತಿ ಆಯ್ಕೆಯಾಗಿದ್ದಾರೆ.

ಇವರಿಗೆ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಡಿಡಿಪಿಐ ಎಸ್.ಜಿ.ನಾಗೇಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT