ಸೋಮವಾರ, ಆಗಸ್ಟ್ 2, 2021
27 °C
ಜಿಲ್ಲಾ ಪಂಚಾಯಿತಿಯ ಐದು ಸಮಿತಿಗಳಿಗೆ ಎರಡನೇ ಅವಧಿಗೆ ಸದಸ್ಯರ ಆಯ್ಕೆ

ಚಿಕ್ಕಬಳ್ಳಾಪುರ: ಜೂ.29 ರಂದು ಸ್ಥಾಯಿ ಸಮಿತಿಗಳಿಗೆ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿಯ ಐದು ಸ್ಥಾಯಿ ಸಮಿತಿಗಳಿಗೆ ಎರಡನೇ ಅವಧಿಗೆ ಸದಸ್ಯರನ್ನು ಆಯ್ಕೆ ಮಾಡಲು ಜೂನ್ 29 ರಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ.

ನಾಮ ನಿರ್ದೇಶನ ಪತ್ರಗಳನ್ನು ಉಮೇದುವಾರರು ಅಥವಾ ಸೂಚಕರು ನಿಗದಿಪಡಿಸಿದ ನಮೂನೆಯಲ್ಲಿ ಸಹಿ ಮಾಡಿ ಸೂಚಿಸಿರುವಂತೆ ಮಾಹಿತಿ ಭರ್ತಿ ಮಾಡಿ ಅಭ್ಯರ್ಥಿಯ ಸಹಿಯೊಂದಿಗೆ ಖುದ್ದಾಗಿ ಅಥವಾ ಸೂಚಕರ ಮುಖಾಂತರ ಜೂನ್ 29ರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ರ ಒಳಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿ ಅವರಿಗೆ ಸಲ್ಲಿಸಬೇಕಿದೆ.

ಈ ಚುನಾವಣೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ, ಸಾಮಾಜಿಕ ನ್ಯಾಯ ಸಮಿತಿ ಹಾಗೂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಗೆ 7 ಸದಸ್ಯರನ್ನು ಮೀರದಂತೆ ಸದಸ್ಯರನ್ನು ಚುನಾಯಿಸಲಾಗುತ್ತದೆ. ನಂತರ ಈ ಮೂರು ಸಮಿತಿಗಳ ಸದಸ್ಯರು ಪ್ರತ್ಯೇಕವಾಗಿ ತಮ್ಮ ತಮ್ಮ ಸ್ಥಾಯಿ ಸಮಿತಿಗಳ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

ಇನ್ನು, ಸಾಮಾನ್ಯ ಸ್ಥಾಯಿ ಸಮಿತಿ, ಹಣಕಾಸು, ಲೆಕ್ಕ ಪರಿಶೋಧನೆ ಮತ್ತು ಯೋಜನೆ ಸ್ಥಾಯಿ ಸಮಿತಿಗಳಿಗೆ 6ಕ್ಕೆ ಮೀರದಂತೆ ಸದಸ್ಯರನ್ನು (ಅಧ್ಯಕ್ಷರು, ಉಪಾಧ್ಯಕ್ಷರನ್ನು ಹೊರತುಪಡಿಸಿ) ಚುನಾಯಿಸಬಹುದಾಗಿದೆ.

ಸಾಮಾನ್ಯ ಸ್ಥಾಯಿ ಸಮಿತಿಗೆ ಉಪಾಧ್ಯಕ್ಷ ಪದನಿಮಿತ್ತ ಸದಸ್ಯ ಮತ್ತು ಅಧ್ಯಕ್ಷರಾಗಿರುತ್ತಾರೆ. ಹಣಕಾಸು ಮತ್ತು ಲೆಕ್ಕ ಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿಗೆ ಅಧ್ಯಕ್ಷ ಪದನಿಮಿತ್ತ ಸದಸ್ಯ ಮತ್ತು ಅಧ್ಯಕ್ಷರಾಗಿರುತ್ತಾರೆ. ಉಳಿದಂತೆ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಗಳ ಸದಸ್ಯರು ತಮ್ಮಲ್ಲೇ ಒಬ್ಬರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.

ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯು ಕಡೆಯ ಪಕ್ಷ ಒಬ್ಬ ಮಹಿಳಾ ಸದಸ್ಯೆ, ಅನುಸೂಚಿತ ಜಾತಿ ಮತ್ತು ಪಂಗಡ ಇವುಗಳಲ್ಲಿ ಯಾವುದು ಹೆಚ್ಚಿನ ಸಂಖ್ಯೆ ಚುನಾಯಿತ ಸದಸ್ಯರನ್ನು ಹೊಂದಿರುವುದೋ ಅದರ ಒಬ್ಬ ಸದಸ್ಯನನ್ನು ಒಳಗೊಂಡಿರಬೇಕಾಗುತ್ತದೆ. ಒಬ್ಬ ಸದಸ್ಯ ಎರಡಕ್ಕಿಂತ ಹೆಚ್ಚು ಸ್ಥಾಯಿ ಸಮಿತಿಗಳಲ್ಲಿರಲು ಅವಕಾಶವಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು