ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂತಾಮಣಿ | ಎರಡು ಬೈಕ್‌ಗಳು ಡಿಕ್ಕಿ: ಐಟಿಐ ವಿದ್ಯಾರ್ಥಿ ಸಾವು

Published 9 ಫೆಬ್ರುವರಿ 2024, 15:38 IST
Last Updated 9 ಫೆಬ್ರುವರಿ 2024, 15:38 IST
ಅಕ್ಷರ ಗಾತ್ರ

ಚಿಂತಾಮಣಿ: ಚಿಂತಾಮಣಿ-ಶ್ರೀನಿವಾಸಪುರ ರಸ್ತೆಯ ಹಂದಿಜೋಗಿಗಡ್ಡೆ ಗೇಟ್ ಬಳಿ ಶುಕ್ರವಾರ ಎರಡು ದ್ವಿಚಕ್ರವಾಹನಗಳು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್‌ನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ.

ತಾಲ್ಲೂಕಿನ ಊಲವಾಡಿ ಗ್ರಾಮದ ಐಟಿಐ ವಿದ್ಯಾರ್ಥಿ ಮನೋಜ್ ಕುಮಾರ್ (20) ಮೃತಪಟ್ಟ ವ್ಯಕ್ತಿ. ಶ್ರೀನಿವಾಸಪುರದ ಅಂಬೇಡ್ಕರ್ ಕಾಲೋನಿಯ ಶ್ರೀನಿವಾಸಪ್ಪ ತೀವ್ರವಾಗಿ ಗಾಯಗೊಂಡರುವ ವ್ಯಕ್ತಿ. ಅದೇ ವಾಹನದಲ್ಲಿ ಹಿಂಬದಿ ಕುಳಿತಿದ್ದ ಶ್ರೀನಿವಾಸ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸಾರ್ವಜನಿಕರು ಕೂಡಲೇ ಗಾಯಾಳುವನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರಕ್ಕೆ ಕಳುಹಿಸಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT