ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ | ಜಿಲ್ಲೆಯಲ್ಲಿ ಶೇ 77ರಷ್ಟು ಮತದಾನ

Published 27 ಏಪ್ರಿಲ್ 2024, 5:11 IST
Last Updated 27 ಏಪ್ರಿಲ್ 2024, 5:11 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಇತಿಹಾಸದಲ್ಲಿ ಈ ಬಾರಿ ಗರಿಷ್ಠ ಪ್ರಮಾಣದಲ್ಲಿ ಮತದಾನವಾಗಿದೆ. ಶೇ 77ರಷ್ಟು ಮತದಾನವಾಗಿದೆ. ರಾತ್ರಿ 10ರವರೆಗೆ ಚುನಾವಣಾ ಆಯೋಗವು ನೀಡಿದ ಮಾಹಿತಿಯ ಪ್ರಕಾರ ಈ ಪ್ರಮಾಣದಲ್ಲಿ ಮತದಾನವಾಗಿದ್ದು ಪ್ರಮಾಣ ಮತ್ತಷ್ಟು ಹೆಚ್ಚುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಶೇ 76.78ರಷ್ಟು ಮತದಾನವಾಗಿತ್ತು.  

ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರಗಳ ಪೈಕಿ ಹೊಸಕೋಟೆಯಲ್ಲಿ ಗರಿಷ್ಠ ಶೇ 86.45 ಮತದಾನವಾಗಿದ್ದರೆ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಶೇ 60.69 ಮತದಾನದ ಮೂಲಕ ಕಡಿಮೆ ಪ್ರಮಾಣದಲ್ಲಿ ಹಕ್ಕು ಚಲಾಯಿಸಿರುವ ವಿಧಾನಸಭಾ ಕ್ಷೇತ್ರ ಎನಿಸಿದೆ. 

2019ರ ಲೋಕಸಭಾ ಚುನಾವಣೆಯಲ್ಲಿಯೂ ಸಹ ಮತಚಲಾವಣೆಯ ಪ್ರಮಾಣದಲ್ಲಿ ಹೊಸಕೋಟೆ ಮೊದಲ ಮತ್ತು ಯಲಹಂಕ ಕೊನೆಯ ಸ್ಥಾನದಲ್ಲಿ ಇತ್ತು. 

ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಸ್ವಕ್ಷೇತ್ರ ಚಿಕ್ಕಬಳ್ಳಾಪುರದಲ್ಲಿ ಶೇ 85  ಮತದಾನವಾಗಿದೆ. ಗರಿಷ್ಠ ಮತದಾನವಾದ ಎರಡನೇ ವಿಧಾನಸಭಾ ಕ್ಷೇತ್ರ ಎನಿಸಿದೆ.

ಚುನಾವಣಾ ಆಯೋಗ ಮತದಾನದ ಮಹತ್ವದ ಕುರಿತು ನಡೆಸಿದ ಪ್ರಚಾರ ಮತದಾನದ ಪ್ರಮಾಣ ಹೆಚ್ಚಲು ಸಹಕಾರಿಯಾಗಿದೆ. ಶೇಕಡವಾರು ಪ್ರಮಾಣ ಹೆಚ್ಚಿಸಲು ಸ್ವೀಪ್ ಸಮಿತಿ ಹತ್ತಾರು ಬಗೆಯ ವೈವಿಧ್ಯಮಯ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಂಡಿತ್ತು.

ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧನೆ, ಜಾಗೃತಿ ಜಾಥಾ, ಬೀದಿ ನಾಟಕ, ಬಸ್‌ಗಳಿಗೆ ಫಲಕ, ಕಲಾ ತಂಡಗಳ ಮೆರವಣಿಗೆ, ಕರಪತ್ರ ವಿತರಣೆ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಮತದಾರರ ಮನಮುಟ್ಟುವ ಪ್ರಯತ್ನ ಮಾಡಿದ್ದರ ಪರಿಣಾಮ ಮತದಾನ ಪ್ರಮಾಣ ಹೆಚ್ಚಳವಾಗಿದೆ.

ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಯಲಹಂಕ ಮತ್ತು ದೊಡ್ಡಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇದ್ದಾರೆ. 

ಉಳಿದಂತೆ ಹೊಸಕೋಟೆ, ಚಿಕ್ಕಬಳ್ಳಾಪುರ, ದೇವನಹಳ್ಳಿ, ನೆಲಮಂಗಲ, ಬಾಗೇಪಲ್ಲಿಯಲ್ಲಿ ಕಾಂಗ್ರೆಸ್ ಶಾಸಕರು, ಗೌರಿಬಿದನೂರಿನಲ್ಲಿ ಪಕ್ಷೇತರ ಶಾಸಕರು ಇದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT