ಚಿಕ್ಕಬಳ್ಳಾಪುರ ಡಿಡಿಪಿಐ ಕಚೇರಿ ಆವರಣದಲ್ಲಿರುವ ಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಬಂದ ವಿದ್ಯಾರ್ಥಿಗಳನ್ನು ಬಿಇಒ ಹಾಗೂ ಶಿಕ್ಷಕರು ಚಾಕೊಲೇಟ್ ಮತ್ತು ಹೂ ನೀಡಿ ಸ್ವಾಗತಿಸಿದರು
ಚಿಕ್ಕಬಳ್ಳಾಪುರ: ಬೇಸಿಗೆ ರಜೆ ಮುಗಿಸಿ ಶುಕ್ರವಾರ ಮೊದಲ ದಿನ ಶಾಲೆಗೆ ಆಗಮಿಸಿದ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ವಿವಿಧ ಸರ್ಕಾರಿ ಶಾಲೆಗಳಲ್ಲಿ ಸಂತಸ, ಸಂಭ್ರಮದ ಸ್ವಾಗತ ನೀಡಲಾಯಿತು.
ADVERTISEMENT
ADVERTISEMENT
ಜಿಲ್ಲೆಯ ಕೆಲವು ಕಡೆ ಆರಂಭದ ಮೊದಲ ದಿನ ಶಾಲೆಗಳಲ್ಲಿ ಹಬ್ಬದ ರಂಗು ತುಂಬುವ ಉದ್ದೇಶದಿಂದ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಮಕ್ಕಳು ಶಾಲೆಯತ್ತ ಹೆಜ್ಜೆ ಇಡುತ್ತಿದ್ದಂತೆ ಶಿಕ್ಷಕರು ಮಕ್ಕಳಿಗೆ ಚಾಕಲೇಟ್ ಸಿಹಿ ನೀಡಿ ಶಾಲೆಯೊಳಗೆ ಬರ ಮಾಡಿಕೊಂಡರು.
ಶಾಲೆಗಳಲ್ಲಿ ಮೊದಲ ದಿನ ಪಾಠ ಇಲ್ಲದ ಕಾರಣ ವಿದ್ಯಾರ್ಥಿಗಳು ಉಲ್ಲಾಸದಿಂದ ಆಟಗಳಲ್ಲಿ ತೊಡಗಿಸಿಕೊಂಡರೆ, ಅನೇಕರು ರಜೆ ಮೋಜಿನ ಗುಂಗಿನಲ್ಲಿ ಇದ್ದರು.
ನಗರದ ಬಿ.ಬಿ ರಸ್ತೆಯ ಡಿಡಿಪಿಐ ಕಚೇರಿ ಆವರಣದಲ್ಲಿರುವ ಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಮೊದಲ ದಿನ ಆಗಮಿಸಿದ ಮಕ್ಕಳಿಗೆ ಶಿಕ್ಷಕರು ಚಾಕಲೇಟ್ ನೀಡಿ ಸ್ವಾಗತ ಕೋರಿದರು. ಇದೇ ವೇಳೆ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಸಮವಸ್ತ್ರವನ್ನು ವಿತರಿಸಲಾಯಿತು.
ADVERTISEMENT
ಪೋಷಕರ ಜೊತೆ ಶಾಲೆಗೆ ಬಂದ ವಿದ್ಯಾರ್ಥಿಗಳು
‘ಶಾಲೆಗಳಿಗೆ ಪಠ್ಯಪುಸ್ತಕ ಪೂರೈಕೆ’ ಚಿಕ್ಕಬಳ್ಳಾಪುರ ತಾಲ್ಲೂಕಿನ ಸರ್ಕಾರಿ ಶಾಲೆಗಳಿಗೆ ಪಠ್ಯ ಪುಸ್ತಕ ಮತ್ತು ಸಮವಸ್ತ್ರಗಳನ್ನು ಪೂರೈಸಲಾಗಿದೆ. ಮಕ್ಕಳು ಮೊದಲ ದಿನ ಉತ್ಸಾಹದಿಂದ ಶಾಲೆಗೆ ಬಂದಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮುನಿವೆಂಕಟ ರಾಮಾಚಾರಿ ತಿಳಿಸಿದ್ದಾರೆ.