ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಝೀಕಾ ವೈರಸ್ | ಎಚ್ಚರಿಕೆ ಇರಲಿ: ಆರೋಗ್ಯಾಧಿಕಾರಿ

Published 3 ನವೆಂಬರ್ 2023, 13:18 IST
Last Updated 3 ನವೆಂಬರ್ 2023, 13:18 IST
ಅಕ್ಷರ ಗಾತ್ರ

ಚಿಂತಾಮಣಿ: ತಾಲ್ಲೂಕಿನ ಗಡಿಗೆ ಹೊಂದಿಕೊಂಡಿರುವ ಶಿಡ್ಲಘಟ್ಟ ತಾಲ್ಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಝೀಕಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಜನರು ಭಯಭೀತರಾಗಬಾರದು. ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಮಚಂದ್ರಾರೆಡ್ಡಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಝೀಕಾ ಎಂಬುದು ಒಂದು ವೈರಸ್ ಸೋಂಕು. ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು 2-7 ದಿನಗಳವರೆಗೆ ಇರುತ್ತದೆ. ಕಣ್ಣು ಕೆಂಪಗಾಗುವುದು, ತಲೆನೋವು, ಜ್ವರ, ಕೀಲು ಮತ್ತು ಸ್ನಾಯುಗಳಲ್ಲಿ ನೋವು ರೋಗದ ಲಕ್ಷಣಗಳಾಗಿವೆ ಎಂದರು.

ರೋಗದ ಲಕ್ಷಣ ಕಂಡುಬಂದರೆ ಗಾಬರಿಯಾಗಬೇಕಿಲ್ಲ. ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದರು.

ಸಾಮಾನ್ಯವಾಗಿ ನಿಂತ ನೀರು ಸೊಳ್ಳೆಗಳ ಉತ್ಪತ್ತಿ ತಾಣಗಳು. ವೈರಸ್ ನಿಯಂತ್ರಣ ಬಹುತೇಕ ಸಾರ್ವಜನಿಕರ ಹಿಡಿತದಲ್ಲಿರುತ್ತದೆ. ಸ್ವಚ್ಛ ಪರಿಸರದಿಂದ ರೋಗ ತಡೆಗಟ್ಟಬಹುದು. ನೀರು ಶೇಖರಣಾ ಪರಿಕರಗಳನ್ನು ಮುಚ್ಚಳದಿಂದ ಮುಚ್ಚಬೇಕು. ವಾರಕ್ಕೊಮ್ಮೆ ಸ್ವಚ್ಛಗೊಳಿಸಬೇಕು. ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.

ಮನೆಯ ಕಿಟಕಿ, ಬಾಗಿಲುಗಳಿಗೆ ಸೊಳ್ಳೆ ನಿಯಂತ್ರಣ ಪರದೆ ಅಳವಡಿಸಬೇಕು. ರೋಗ ತಡೆಗೆ ಸ್ವಯಂ ನಿಯಂತ್ರಣ ಹೊಂದುವುದು ಮುಖ್ಯ ಎಂದು ತಿಳಿಸಿದರು. ಹಿರಿಯ ಆರೋಗ್ಯ ನಿರೀಕ್ಷಕ ಶ್ರೀನಿವಾಸರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT