ಚಿಕ್ಕನಾಯಕನಹಳ್ಳಿ: ರಾಗಿ ಬೆಳೆಗೆ ಕೃಷಿ ಪ್ರಶಸ್ತಿ ನೀಡುವ ಯೋಜನೆಯನ್ನು ಕೃಷಿ ಇಲಾಖೆ ಹಮ್ಮಿಕೊಂಡಿದೆ. ಪ್ರಶಸ್ತಿಗೆ ಈಗಾಗಲೇ ಅರ್ಜಿ ಆಹ್ವಾನಿಸಿದ್ದು, ಆ.31 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಎಂದು ಸಹಾಯಕ ಕೃಷಿ ನಿರ್ದೇಶಕ ಶಿವರಾಜ್ ಕುಮಾರ್ ತಿಳಿಸಿದ್ದಾರೆ.
ಕೃಷಿ ಪ್ರಶಸ್ತಿ ಸ್ಪರ್ಧೆಗೆ ಆಸಕ್ತ ರೈತರು ಹಾಗೂ ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಾರ್ವಜನಿಕ ಸೇವಾ ಕೇಂದ್ರದ ಮೂಲಕ ಆನ್‌ಲೈನ್ ತಂತ್ರಾಂಶದಲ್ಲಿ ಆ.31 ರೊಳಗೆ ನೊಂದಾಯಿಸಬಹುದು. ಅಗತ್ಯ ಪ್ರಮಾಣ ಪತ್ರಗಳನ್ನು ಆನ್‌ಲೈನ್ ತಂತ್ರಾಂಶದಲ್ಲಿ ದಾಖಲಿಸಬೇಕು.
ಹೆಚ್ಚಿನ ಮಾಹಿತಿಗೆ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಅಥವಾ ಕಚೇರಿ ಸಂಪರ್ಕಿಸುವಂತೆ ಸಹಾಯಕ ಕೃಷಿ ನಿರ್ದೇಶಕ ಶಿವರಾಜ್ ಕುಮಾರ್ ತಿಳಿಸಿದ್ದಾರೆ.