ಚಿಕ್ಕಬಳ್ಳಾಪುರ: 18ರಿಂದ 44 ವರ್ಷದ ಒಳಗಿನವರು ಕೋವಿಡ್-19 ಲಸಿಕೆ ಪಡೆಯಲು ಕೋವಿನ್ ಅಥವಾ ಆರೋಗ್ಯ ಸೇತು ಆ್ಯಪ್ ಮೂಲಕ ಹೆಸರು ನೋಂದಾಯಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಆರ್.ಲತಾ ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿರುವ ಅರ್ಹ ವಯೋ ಮಾನದವರು ನೋಂದಾಯಿ ಸಿಕೊಳ್ಳಬೇಕು. ಈ ವಯೋ ಮಾನ ದವರಿಗೆ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ನೋಂದಣಿ ಇಲ್ಲದೆ ನೇರವಾಗಿ ಲಸಿಕಾ ಕೇಂದ್ರಕ್ಕೆ ಬರುವವರಿಗೆ ಅವಕಾಶವಿಲ್ಲ ಎಂದು ಹೇಳಿದ್ದಾರೆ.

ಪ್ರತಿ ಕೇಂದ್ರಕ್ಕೆ 150 ಫಲಾನುಭವಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಾನದ 6,05,366 ಫಲಾನುಭವಿಗಳಿಗೆ ಲಸಿಕೆ ಹಾಕಲು ರಾಜ್ಯ ಸರ್ಕಾರ ಗುರಿ ನಿಗದಿಪಡಿಸಿದೆ ಎಂದು ಮಾಹಿತಿ ನೀಡಿದ್ದಾರೆ.

45 ವರ್ಷ ಮೇಲ್ಪಟ್ಟವರಿಗೆ 2ನೇ ಡೋಸ್ ಲಸಿಕೆಯನ್ನು ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂದಿನಂತೆ ನೀಡಲಾಗುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ 2ನೇ ಡೋಸ್ ಲಸಿಕೆಯನ್ನು ಮಾತ್ರ ನೀಡಲು ಅವಕಾಶವಿದೆ. ಅನಿವಾರ್ಯ ಸಮಯದಲ್ಲಿ ಶೇ 10 ರಷ್ಟು 1ನೇ ಡೋಸ್ ಲಸಿಕೆ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.