ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ಯ ವಿವಾಹ ತಡೆಗಟ್ಟಿ

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಗತಿ ಪರಿಶೀಲನಾ ಸಭೆ
Last Updated 16 ಜನವರಿ 2020, 14:16 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರೌಢಶಾಲೆ, ಗ್ರಾಮ ಪಂಚಾಯಿತಿ ಕಚೇರಿ, ಬಸ್, ರೈಲು ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮೂಡಿಸುವಂತಹ ಭಿತ್ತಿಪತ್ರಗಳು, ಗೋಡೆ ಬರಹಗಳ ಮೂಲಕ ಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶ ಮತ್ತು ತಾಂಡಾಗಳಲ್ಲಿ ಇಂದಿಗೂ ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗುತ್ತಿವೆ. ಹೆಚ್ಚು ಪ್ರಕರಣಗಳು ವರದಿಯಾಗಿರುವ ಪ್ರದೇಶಗಳಲ್ಲಿ ಬಾಲ್ಯ ವಿವಾಹದ ದುಷ್ಪರಿಣಾಮ ಕುರಿತಂತೆ ವ್ಯಾಪಕ ಪ್ರಚಾರದ ಮೂಲಕ ಅಧಿಕಾರಿಗಳು ಅರಿವು ಮೂಡಿಸುವ ಕೆಲಸ ಮಾಡಬೇಕು’ ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಲಕ್ಷ್ಮೀದೇವಮ್ಮ ಮಾತನಾಡಿ, ‘ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಅನಾಥ, ನಿರ್ಗತಿಕ, ದೌರ್ಜನ್ಯಕ್ಕೀಡಾದ ಮತ್ತು ಕಾನೂನು ಸಂಘರ್ಷಕ್ಕೊಳಪಟ್ಟ ಮಕ್ಕಳ ಪಾಲನೆ, ರಕ್ಷಣೆ ಹಾಗೂ ಪುನರ್ವಸತಿಗಾಗಿ ಕಾರ್ಯನಿರ್ವಹಿಸುತ್ತಿದೆ. ಅಲ್ಲದೆ, ಘಟಕದಿಂದ ಸರ್ಕಾರಿ ಬಾಲಕಿಯರ ಬಾಲಮಂದಿರ, ತೆರೆದ ತಂಗುದಾಣ, ವಿಶೇಷ ದತ್ತು ಕೇಂದ್ರ, ಮಕ್ಕಳ ಪಾಲನಾ ಸಂಸ್ಥೆಗಳು ಹಾಗೂ ಮಕ್ಕಳ ಸಹಾಯವಾಣಿ (1098) ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ನೋಮೇಶ್‌ ಕುಮಾರ್, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT