ಚಿಂತಾಮಣಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮೇಲೆ ಶೂ ಎಸೆದ ಘಟನೆ ಖಂಡಿಸಿ ಸೋಮವಾರ ಪ್ರಗತಿಪರ ಸಂಘಟನೆಗಳ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.

ದಲಿತ ಸಂಘರ್ಷ ಸಮಿತಿ ಮತ್ತು ಕರ್ನಾಟಕ ಪ್ರಾಂತ ರೈತ ಸಂಘ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ನಂತರ ತಾಲ್ಲೂಕು ಆಡಳಿತ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಘಟನೆ ಹಿಂದೆ ‘ಸನಾತನ ಧರ್ಮದ ಹೆಸರಿನಲ್ಲಿ ವಿಚಿತ್ರ ಶಕ್ತಿಗಳು’ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು. ಕೇಂದ್ರದ ಬಿಜೆಪಿ ಸರ್ಕಾರ ಕಂಡೂ ಕಾಣದ ಕುರುಡು ನೀತಿ ಇಂತಹ ಘಟನೆಗಳನ್ನು ಪ್ರೋತ್ಸಾಹಿಸುತ್ತಿದೆ ಎಂದು ತಿಳಿಸಿದರು. ಈ ಘಟನೆ ಸಂಪೂರ್ಣ ಜವಾಬ್ದಾರಿ ಕೇಂದ್ರ ಸರ್ಕಾರದ್ದು ಎಂದು ಆಗ್ರಹಿಸಿದರು.

ಆರೋಪಿ ಮೇಲೆ ಕಟ್ಟುನಿಟ್ಟಾದ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಘಟನೆ ಹಿಂದಿರುವ ಕೋಮುವಾದಿ ಶಕ್ತಿಗಳನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಆನಂದ್, ಕಾರ್ಯದರ್ಶಿ ಲಕ್ಷ್ಮಿನಾರಾಯಣರೆಡ್ಡಿ, ದಲಿತ ಸಂಘರ್ಷ ಸಮಿತಿ ಹಿರಿಯ ಮುಖಂಡ ಗಡ್ಡಂ ವೆಂಕಟೇಶ್, ಜಿಲ್ಲಾ ಸಂಚಾಲಕ ವಿ.ನರಸಿಂಹಪ್ಪ, ತಾಲ್ಲೂಕು ಸಂಚಾಲಕ ಶ್ರೀರಂಗಪ್ಪ ಸೇರಿದಂತೆ ಹಲವು ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.