ಚಿಂತಾಮಣಿ: ತಾಲ್ಲೂಕಿನ ಐಮರೆಡ್ಡಿಹಳ್ಳಿ ಗ್ರಾಮದಲ್ಲಿ ಬಿ.ಆರ್.ಅಂಬೇಡ್ಕರ್ 135ನೇ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಗ್ರಾಮದ ಅಂಬೇಡ್ಕರ್ ಯುವಕರ ಬಳಗದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.

ಮುಖಂಡ ಜನ ನಾಗಪ್ಪ ಮಾತನಾಡಿ, ‘ಬಾಬಾಸಾಹೇಬ್ ಅಂಬೇಡ್ಕರ್ ಕೇವಲ ಒಂದು ವರ್ಗಕ್ಕೆ ಸೀಮಿತವಾದವರಲ್ಲ. ಅವರು ಇಡೀ ದೇಶದ ಅಸ್ಮಿತೆ. ಸಂವಿಧಾನದ ಅಡಿಯಲ್ಲಿ ನಾವೆಲ್ಲರೂ ಸಮಾನತೆಯ ಬದುಕು ನಡೆಸುತ್ತಿದ್ದೇವೆ. ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮೂಲಕ ನಾವು ಸಮಾಜದಲ್ಲಿ ಮುಖ್ಯವಾಹಿನಿಗೆ ಬರಬೇಕು’ ಎಂದು ಮನವಿ ಮಾಡಿದರು.

ಗ್ರಾಮದ ಹಿರಿಯರು, ಯುವಕರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಅಂಬೇಡ್ಕರ್ ತತ್ವ, ಆದರ್ಶಗಳನ್ನು ಪಾಲಿಸುವ ಕುರಿತು ಸಂಕಲ್ಪ ಮಾಡಲಾಯಿತು. ಯುವ ಸಮುದಾಯವು ಬಾಬಾಸಾಹೇಬರ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಮುಖಂಡರು ಒತ್ತಿ ಹೇಳಿದರು.

ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು. ಎಂಜಿನಿಯರ್ ವಿ.ಸಂತೋಷ್, ವಕೀಲ ಮಂಜುನಾಥ್, ಸೈಯದ್ ಬುಡನ್, ಪಿ.ವಿ ಮಂಜುನಾಥ್, ಜಾನ್ ಪೀಟರ್, ರೈತ ಸಂಘದ ಯುವ ರಾಜ್ಯಾಧ್ಯಕ್ಷ ಮುನಿಯಪ್ಪ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-16-1032660722

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.