ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂತಾಮಣಿ: ಹಾಜರಾತಿ ಕಡಿಮೆ

Last Updated 2 ಜನವರಿ 2021, 4:14 IST
ಅಕ್ಷರ ಗಾತ್ರ

ಚಿಂತಾಮಣಿ: ತಾಲ್ಲೂಕಿನಲ್ಲಿ ಶಾಲಾ, ಕಾಲೇಜುಗಳು ಶುಕ್ರವಾರ ಪುನರಾರಂಭವಾದವು. ಆದರೆ ಮೊದಲ ದಿನ ತಾಲ್ಲೂಕಿನಲ್ಲಿ ವಿದ್ಯಾರ್ಥಿಗಳ ಹಾಜರಾತಿ ನಿರೀಕ್ಷಿತ ಮಟ್ಟದಲ್ಲಿ ಇರಲಿಲ್ಲ.

ತಾಲ್ಲೂಕಿನಲ್ಲಿ 24 ಸರ್ಕಾರಿ, 13 ಅನುದಾನಿತ, 3 ವಸತಿ ಹಾಗೂ 37 ಅನುದಾನರಹಿತ ಶಾಲೆಗಳು ಸೇರಿ ಒಟ್ಟು 77 ಪ್ರೌಢಶಾಲೆಗಳಿವೆ. ಸುಮಾರು 4 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಹಾಜರಾತಿ ಶೇ 30ರಿಂದ 40ರಷ್ಟು ಮಾತ್ರ ಇತ್ತು.

‘ಹೊಸ ವರ್ಷದ ದಿನ ವಿದ್ಯಾರ್ಥಿಗಳು ಗೈರು ಹಾಜರಾಗಿ ದೇವಾಲಯಗಳಿಗೆ ಹಾಗೂ ಪ್ರೇಕ್ಷಣೀಯ ಸ್ಥಳಗಳಿಗೆ ತೆರಳು
ವುದು ಪ್ರತಿ ವರ್ಷ ಮಾಮೂಲಿ. ಕೆಲವು ಪೋಷಕರು ಒಂದೆರಡು ದಿನ ಕಾದು ನೋಡುವ ತಂತ್ರವನ್ನು ಅಳವಡಿಸಿಕೊಂಡಿದ್ದಾರೆ. ಬಹುತೇಕ ಸೋಮವಾರದಿಂದ ಸಂಪೂರ್ಣ ಹಾಜರಾತಿ ಇರುತ್ತದೆ’ ಎಂದು ಶಿಕ್ಷಕ ಕೃಷ್ಣಮೂರ್ತಿ ತಿಳಿಸಿದರು.

ಶಾಲೆಗಳಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಗ್ರಾಮೀಣ ಭಾಗಗಳಲ್ಲಿ ಗ್ರಾಮ ಪಂಚಾಯಿತಿಗಳಿಂದ ಹಾಗೂ ನಗರ ಪ್ರದೇಶದಲ್ಲಿ ನಗರಸಭೆ
ಯಿಂದ ಸ್ಯಾನಿಟೈಜರ್ ಮಾಡಲಾಗಿತ್ತು. ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಿ ಒಳಗಡೆ ಪ್ರವೇಶ ನೀಡಲಾಗುತ್ತಿತ್ತು. ಪ್ರತಿಯೊಬ್ಬರೂ ಮಾಸ್ಕ್ ಧರಿಸಿದ್ದರು. ಕನಿಷ್ಠ ಅಂತರ ಕಾಯ್ದುಕೊಳ್ಳುವ ಬಗ್ಗೆಯೂ ಶಿಕ್ಷಕರು ತಿಳುವಳಿಕೆ ಮೂಡಿಸುತ್ತಿದ್ದರು. ಕೊಠಡಿಗೆ 15-20 ವಿದ್ಯಾರ್ಥಿಗಳ ತಂಡಗಳನ್ನು ಮಾಡಿ, ಒಂದೊಂದು ತಂಡವನ್ನು ಒಂದು ಕೊಠಡಿಗೆ ಪ್ರವೇಶ ನೀಡಲಾಗಿತ್ತು.

‘ಎಲ್ಲ ಶಾಲೆಗಳನ್ನು ಸ್ವಚ್ಛಗೊಳಿಸಲಾಗಿದೆ. ಹಾಜರಾಗುವ ವಿದ್ಯಾರ್ಥಿಗಳ ಪೋಷಕರ ಒಪ್ಪಿಗೆ ಪತ್ರವನ್ನು ಪಡೆಯಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಇ.ಸಿ.ಒ ರಾಜಣ್ಣ ತಿಳಿಸಿದರು.

ವಿದ್ಯಾಗಮ ಯೋಜನೆಯು ಸಹ ಶುಕ್ರವಾರದಿಂದ ಆರಂಭವಾಗಿದೆ. ಶಾಲಾ ಆವರಣದಲ್ಲೇ ತಂಡಗಳಲ್ಲಿ ಕುಳಿತು 6ರಿಂದ 9ನೇ ತರಗತಿಯ ವಿದ್ಯಾರ್ಥಿಗಳು ಕಲಿಕೆಯಲ್ಲಿ ಭಾಗವಹಿಸಿದ್ದರು.

ಪಿಯುಸಿ ತರಗತಿಗಳಲ್ಲೂ ಹಾಜರಾತಿ ಕಡಿಮೆ ಇತ್ತು. ಖಾಸಗಿ ಪಿ.ಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಉತ್ತಮವಾಗಿತ್ತು. ಸರ್ಕಾರಿ ಕಾಲೇಜುಗಳಲ್ಲಿ ಹಾಜರಾತಿ ಕಡಿಮೆ ಇತ್ತು. ಪಿ.ಯು ಕಾಲೇಜುಗಳಲ್ಲೂ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

‘ಹೊಸವರ್ಷ ಹಾಗೂ ಮೊದಲ ದಿನದ ಹಿನ್ನೆಲೆಯಲ್ಲಿ ಹಾಜರಾತಿ ಶೇ 50ರಷ್ಟು ಇದೆ. ಹಾಜರಾದ ವಿದ್ಯಾರ್ಥಿಗಳು ಆಸಕ್ತಿ, ಉತ್ಸಾಹದಿಂದ ಪಾಲ್ಗೊಂಡಿದ್ದರು. ಮಾಸ್ಕ್, ಥರ್ಮಲ್ ಸ್ಕ್ರೀನಿಂಗ್, ಅಂತರ ಕಾಪಾಡಿಕೊಳ್ಳುವುದು ಮತ್ತಿತರ ಎಲ್ಲ ಮಾರ್ಗಸೂಚಿಗಳನ್ನು ಕೈಗೊಳ್ಳಲಾಗಿದೆ’ ಎಂದು ಕೆ.ರಾಗುಟ್ಟಹಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸುಬ್ಬಾರೆಡ್ಡಿ ತಿಳಿಸಿದರು.

‘ಸೋಮವಾರದಿಂದ ಶಾಲೆಗಳು ಆರಂಭವಾಗಿದ್ದರೆ ಚೆನ್ನಾಗಿತ್ತು. ಶುಕ್ರವಾರ ಹೊಸ ವರ್ಷದ ದಿನವಾಗಿರುವುದರಿಂದ ವಿದ್ಯಾರ್ಥಿಗಳು ಶಾಲೆಗಳಿಗೆ ಗೈರು ಹಾಜರಾಗುವುದು ಸಹಜ. ಶನಿವಾರವೂ ವಿದ್ಯಾರ್ಥಿಗಳು ಕಡಿಮೆ ಇರುತ್ತಾರೆ. ಬಹುತೇಕ ಪೋಷಕರು ಸೋಮವಾರದಿಂದ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುತ್ತಾರೆ’ ಎಂದು ಪೋಷಕ ಪಾಪಣ್ಣ ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT