ಚಿಂತಾಮಣಿ: ಸಾರ್ವಜನಿಕರು ಆಯುಷ್ಮಾನ್ ಇಲಾಖೆಯ ಆಯುರ್ವೇದ ಆಸ್ಪತ್ರೆಯ ಪ್ರಯೋಜನವನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಸ್. ಆನಂದ್ ತಿಳಿಸಿದರು.

ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಪಂಚಾಯಿತಿಯ ಆಯುಷ್ಮಾನ್ ಇಲಾಖೆಯ ಸರ್ಕಾರಿ ಆಯುರ್ವೇದ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿದರು.

ಆಸ್ಪತ್ರೆ ವಾರ್ಡ್ ಮತ್ತು ಔಷಧಿ ಕೊಠಡಿಗಳನ್ನು ಪರಿಶೀಲಿಸಿದರು. ವೈದ್ಯಾಧಿಕಾರಿಗಳೊಂದಿಗೆ ಬೇಡಿಕೆ ಇರುವ ಔಷಧಿಗಳು ಮತ್ತು ಇತರೆ ಸಮಸ್ಯೆಗಳ ಕುರಿತು ಸಮಾಲೋಚಿಸಿದರು. ಹಿಂದಿನ ಕಾಲದಲ್ಲಿ ಸಾರ್ವಜನಿಕರಿಗೆ ಕಾಡಿನಲ್ಲಿ ಸಿಗುವ ಆಹಾರ ಪದಾರ್ಥಗಳ ಜೊತೆಗೆ ಗಿಡಮೂಲಿಕೆಗಳಿಂದ ಔಷಧಿ ತಯಾರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಾಲ ಬದಲಾದಂತೆ ಇಂಗ್ಲಿಷ್ ಔಷಧ ಬಳಕೆಗೆ ಬಂದಿದೆ ಎಂದರು.

ಆಸ್ಪತ್ರೆ ವೈದ್ಯಾಧಿಕಾರಿ ಜಿ. ಸುಪರ್ಣ ಮಾತನಾಡಿ, ನಮ್ಮ ಆಸ್ಪತ್ರೆಯಲ್ಲಿ ಪಂಚಕರ್ಮ ಚಿಕಿತ್ಸೆ ಲಭ್ಯವಿದೆ. ಪ್ರತಿಯೊಬ್ಬರೂ ಇಂತಹ ಸೌಲಭ್ಯ ಪಡೆಯಬೇಕು. ಆಸ್ಪತ್ರೆ ಉನ್ನತೀಕರಣ ಮತ್ತು ಸೌಲಭ್ಯಗಳ ಹೆಚ್ಚಳಕ್ಕೆ ಸಹಕಾರ ನೀಡಬೇಕು ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ರಾಮಚಂದ್ರರೆಡ್ಡಿ, ಆಯುಷ್ ಇಲಾಖೆಯ ಆಯುರ್ವೇದ ಆಸ್ಪತ್ರೆ ತಜ್ಞ ಡಾ. ಎ.ಅನಿಲ್ ಕುಮಾರ್, ಡಾ. ರೂಪ ಮತ್ತು ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-16-1151155057

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.