ಚಿಂತಾಮಣಿ: ಬಕ್ರೀದ್ ಹಬ್ಬಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಹಬ್ಬ ಆಚರಣೆ ಅಂಗವಾಗಿ ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ಶಾಂತಿ ಸಮಿತಿ ಸಭೆ ಕರೆಯಲಾಗಿತ್ತು.

ನಗರ ಠಾಣೆ ಇನ್ಸ್ಪೆಕ್ಟರ್ ವಿಜಿಕುಮಾರ್ ಮಾತನಾಡಿ, ‘ಇದೇ 28ರಂದು ನಡೆಯಲಿರುವ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು. ಯಾವುದೇ ಗೊಂದಲ, ಅಶಾಂತಿಗೆ ಆಸ್ಪದ ನೀಡಬಾರದು’ ಎಂದು ತಿಳಿಸಿದರು.

ಚಿಂತಾಮಣಿ ಜನರು ಶಾಂತಿ, ಸೌಹಾರ್ದತೆಗೆ ಹೆಸರಾದವರು. ನಗರದಲ್ಲಿ ಈವರೆಗೆ ಯಾವುದೇ ಗಲಟೆ ನಡೆದಿಲ್ಲ. ಎಲ್ಲ ಹಬ್ಬಗಳಲ್ಲಿ ಶಾಂತಿ ಕಾಪಾಡಿಕೊಂಡು ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಿದ್ದಾರೆ. ಇದೇ ಸಹಕಾರ ಮುಂದುವರೆಸಬೇಕು ಎಂದು ಮನವಿ ಮಾಡಿದರು.

ಯುವಕರು, ಹುಡುಗರಿಗೆ ಹಿರಿಯರು ಬುದ್ಧಿ ಹೇಳಬೇಕು. ಮೆರವಣಿಗೆ ದಿನ ಯಾವುದೇ ಗೊಂದಲ ಉಂಟಾಗಬಾರದು. ಎಲ್ಲ ಸಮುದಾಯದವರ ಸಹಕಾರದಿಂದ ಹಬ್ಬ ಆಚರಿಸಬೇಕು ಎಂದರು.

ಮೆರವಣಿಗೆ ಹೋಗುವವರ ಬ್ಯಾನರ್ ಕಟ್ಟುವಾಗ ಇತರರಿಗೆ ಮುಜುಗುರ, ತೊಂದರೆ ಆಗದಂತೆ ನಡೆದುಕೊಳ್ಳಬೇಕು. ಯಾವುದೇ ಅಹಿತಕರ ಘಟನೆ ಕಂಡುಬಂದರೆ ಕಾನೂನು ಕೈಗೆ ತೆಗೆದುಕೊಳ್ಳದೆ ಪೊಲೀಸರ ಗಮನಕ್ಕೆ ತರಬೇಕು ಎಂದರು.

ಶಾಂತಿ ಸುವ್ಯವಸ್ಥೆಯಿಂದ ಹಬ್ಬ ಆಚರಿಸಲು ಪೊಲೀಸ್ ಇಲಾಖೆಯು ಎಲ್ಲ ರೀತಿಯ ವ್ಯವಸ್ಥೆ ಮಾಡಲಿದೆ. ನಗರದ ವೃತ್ತಗಳು ಮತ್ತು ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಕಾವಲು ಇರಲಿದೆ. ಹಬ್ಬದ ಮೆರವಣಿಗೆಗೂ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗುತ್ತದೆ. ಎಲ್ಲ ಸಮುದಾಯಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಪೊಲೀಸ್ ಅಧಿಕಾರಿಗಳು ಹಾಗೂ ನಗರದ ಮುಸ್ಲಿಮರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-16-2101523128

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.