ಚಿಂತಾಮಣಿ: ಚಿಂತಾಮಣಿ–ಬೆಂಗಳೂರು ರಾಜ್ಯ ಹೆದ್ದಾರಿ ಹಾದು ಹೋಗುವ ತಾಲ್ಲೂಕಿನ ತಳಗವಾರ ಗ್ರಾಮದ ಬಳಿ ಭಾನುವಾರ ರಾತ್ರಿ ಟ್ರ್ಯಾಕ್ಟರ್ ಟ್ರಾಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರ ತಾಲ್ಲೂಕಿನ ಕ್ಯಾಲನೂರು ಬಳಿಯ ಚನ್ನಸಂದ್ರ ಗ್ರಾಮದ ಸಂಚುಲಪ್ಪ (50) ಮೃತಪಟ್ಟ ವ್ಯಕ್ತಿ. ತಾಲ್ಲೂಕಿನ ಜೋಡಿಹೊಸಹಳ್ಳಿಯಿಂದ ಕೈವಾರಕ್ಕೆ ಹೊರಟ್ಟಿದ್ದ ಟ್ರ್ಯಾಕ್ಟರ್ ತಳಗವಾರದ ಬಳಿ ರಸ್ತೆ ಹಂಪ್ ಬಳಿ ನಿಧಾನವಾಗಿ ಚಲಿಸುತ್ತಿತ್ತು. ಈ ವೇಳೆ ಚನ್ನಸಂದ್ರ ಗ್ರಾಮದಿಂದ ಕೈವಾರದತ್ತ ವೇಗವಾಗಿ ತೆರಳುತ್ತಿದ್ದ ಬೈಕ್ ಸವಾರ ಹಿಂದಿನಿಂದ ಗುದ್ದಿದ್ದಾನೆ. ಡಿಕ್ಕಿಯ ರಭಸಕ್ಕೆ ಬೈಕ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬೈಕ್ನಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದರಿಂದ ಗಾಬರಿಗೊಂಡ ಚಾಲಕ ಟ್ರ್ಯಾಕ್ಟರ್ ನಿಲ್ಲಿಸದೆ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಭೇಟಿ ನೀಡಿದ ಕೈವಾರ ಹೊರಠಾಣೆ ಸಹಾಯಕ ಸಬ್ಇನ್ಸ್ಪೆಕ್ಟರ್ ಪ್ರಕಾಶ್, ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆಗಾಗಿ ಮೃತನ ಶವವನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಬೈಕ್ ಮತ್ತು ಟ್ರ್ಯಾಕ್ಟರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.