ಚಿಂತಾಮಣಿ: ಅನರ್ಹ ಬಿಪಿಎಲ್ ಕಾರ್ಡ್ಗಳ ಪತ್ತೆ ಕಾರ್ಯವನ್ನು ಚುರುಕುಗೊಳಿಸಿರುವ ಆಹಾರ ಮತ್ತು ನಾಗರಿಕ ಸರಬರಾಜು ಅಧಿಕಾರಿಗಳು, ತಾಲ್ಲೂಕಿನಾದ್ಯಂತ ಒಟ್ಟಾರೆ 2,815 ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಪತ್ತೆ ಹಚ್ಚಿದ್ದಾರೆ. ಅಲ್ಲದೆ, ಅವುಗಳನ್ನು ಎಪಿಎಲ್ ಆಗಿ ಪರಿವರ್ತನೆ ಮಾಡಿದ್ದಾರೆ.

ತಾಲ್ಲೂಕಿನಲ್ಲಿ 5,399 ಅಂತ್ಯೋದಯ, 2,165 ಎಪಿಎಲ್, 65,362 ಬಿಪಿಎಲ್ ಕಾರ್ಡ್ಗಳು ಸೇರಿ ಒಟ್ಟು 72,926 ಕಾರ್ಡ್ಗಳಿವೆ. ಪಡಿತರ ಕಾರ್ಡ್ಗಳ ಪರಿಶೀಲನೆ ನಡೆಸಿ ಅನರ್ಹ ಕಾರ್ಡ್ಗಳನ್ನು ರದ್ದುಪಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇತ್ತೀಚೆಗೆ ಆದೇಶಿವೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ಅನರ್ಹ ಕಾರ್ಡ್ ಪತ್ತೆ ಮಾಡುವಂತೆ ಸೂಚಿಸಲಾಗಿತ್ತು.

ಕೇಂದ್ರ ಸರ್ಕಾರದ ಮಾನದಂಡ ಮತ್ತು ರಾಜ್ಯ ಸರ್ಕಾರದ ಕುಟುಂಬ ತಂತ್ರಾಂಶ ದತ್ತಾಂಶದ ಮೂಲಕ ಅಧಿಕಾರಿಗಳು ಪರಿಶೀಲನೆ ನಡೆಸಿ 2,815 ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ, ಎಪಿಎಲ್ಗೆ ಪರಿವರ್ತಿಸಿದ್ದಾರೆ. ಸದ್ಯ ಎಪಿಎಲ್ಗೆ ಯಾವುದೇ ರೀತಿಯ ಪಡಿತರ ನೀಡುತ್ತಿಲ್ಲ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರಕ್ಕೆ ತೆರಿಗೆ ಕಟ್ಟುವ 2,148 ಮಂದಿ, 607 ಮಂದಿ ಆದಾಯ ತೆರಿಗೆದಾರರು, 7.5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿದ 60 ಮಂದಿ ಸೇರಿದಂತೆ ಒಟ್ಟಾರೆ 2,815 ಬಿಪಿಎಲ್ ಕಾರ್ಡ್ ಹೊಂದಿದ್ದ ಫಲಾನುಭವಿಗಳನ್ನು ಅನರ್ಹರ ಗುಂಪಿಗೆ ಸೇರಿಸಲಾಗಿದೆ. ಕಳೆದ 12 ತಿಂಗಳುಗಳಿಂದ ಪಡಿತರ ಪಡೆಯದವರು, ಮೃತರ ಹೆಸರಿನಲ್ಲಿ ಪಡಿತರ ಪಡೆಯುತ್ತಿರುವ ಮಾಹಿತಿ ಲಭ್ಯವಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಅಂತ್ಯೋದಯ ಕಾರ್ಡ್ದಾರರಿಗೆ ಕೇಂದ್ರ ಸರ್ಕಾರದ ಯೋಜನೆಯಡಿ 35 ಕೆ.ಜಿ ಅಕ್ಕಿ, ರಾಜ್ಯ ಸರ್ಕಾರದ ಯೋಜನೆಯಡಿ ಕುಟುಂಬದಲ್ಲಿ ಮೂರು ಜನರಿಗಿಂತ ಹೆಚ್ಚಿದ್ದರೆ ಪ್ರತಿಯೊಬ್ಬರಿಗೆ ತಲಾ 5 ಕೆ.ಜಿಯಂತೆ ಅಕ್ಕಿ ವಿತರಿಸಲಾಗುತ್ತಿದೆ. ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬರ ಪ್ರತಿಯೊಬ್ಬ ಸದಸ್ಯರಿಗೆ ಕೇಂದ್ರ ಸರ್ಕಾರದ 5 ಕೆ.ಜಿ ಮತ್ತು ರಾಜ್ಯ ಸರ್ಕಾರದ 5 ಕೆ.ಜಿ ಅಕ್ಕಿ ನೀಡಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಹಾಯಕ ನಿರ್ದೇಶಕ ನಟರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.

ಅಂತ್ಯೋದಯ ಮತ್ತು ಬಿಪಿಎಲ್ ಪಡೆಯಲು ಅರ್ಹರಲ್ಲದವರು ಕಾರ್ಡ್ಗಳನ್ನು ಹೊಂದಿದ್ದಾರೆ. ಹೀಗಾಗಿ ಪಡಿತರ ಸೇರಿದಂತೆ ಹಲವಾರು ಸೌಲಭ್ಯಗಳು ಅನರ್ಹರ ಪಾಲಾಗುತ್ತಿದ್ದವು. ಅದನ್ನು ತಪ್ಪಿಸಲು ಸರ್ಕಾರದ ನಿರ್ದೇಶನದ ಮೇರೆಗೆ ಇಲಾಖೆ ಅಧಿಕಾರಿಗಳು ಫಲಾನುಭವಿಗಳ ಪರಿಶೀಲನೆ ನಡೆಸಿ ಅನರ್ಹ ಪಡಿತರದಾರರನ್ನು ಪತ್ತೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.