ಚಿಂತಾಮಣಿ: ತಾಲ್ಲೂಕಿನಲ್ಲಿ 60,446 ಬಿಪಿಎಲ್, 5,277 ಅಂತ್ಯೋದಯ ಕಾರ್ಡ್ದಾರರು ಪ್ರತಿ ತಿಂಗಳು ಉಚಿತವಾಗಿ ಆಹಾರ ಧಾನ್ಯ ಪಡೆಯುತ್ತಿದ್ದಾರೆ.

ಸದ್ಯಕ್ಕೆ ಹೊಸದಾಗಿ ಪಡಿತರ ಚೀಟಿ ಪಡೆಯಲು ಅವಕಾಶವಿಲ್ಲ. ಹೊಸ ಬಿಪಿಎಲ್ ಪಡಿತರ ಚೀಟಿಗಳಿಗಾಗಿ 2023-24ರಲ್ಲಿ ಜನರು ಸಲ್ಲಿಸಿದ್ದ ಅರ್ಜಿಗಳನ್ನು ಆಹಾರ ಇಲಾಖೆಯ ಅಧಿಕಾರಿಗಳು ಪೂರ್ಣವಾಗಿ ವಿಲೇವಾರಿ ಮಾಡಿದ್ದಾರೆ.

ತಾಲ್ಲೂಕಿನಲ್ಲಿ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಬಿಪಿಎಲ್ ಪಡಿತರ ಚೀಟಿ ವಿತರಣೆ ಮಾಡಲು 2023-24ರಲ್ಲಿ ಸರ್ಕಾರ ಅರ್ಜಿ ಕರೆದಿತ್ತು. ಬಿಪಿಎಲ್ ಚೀಟಿ ನಿರೀಕ್ಷೆಯಿಂದ 817 ಮಂದಿ ಅರ್ಜಿ ಸಲ್ಲಿಸಿದ್ದರು. ಹೊಸ ಚೀಟಿ ವಿತರಿಸುವ ಪ್ರಕ್ರಿಯೆಗೆ ಚಾಲನೆ ನೀಡಿರಲಿಲ್ಲ. ಕೆಲವು ಕಡೆ ಜನರು ಪ್ರತಿಭಟನೆ ಮಾಡಿದ್ದರು. ಇದರಿಂದ ಎಚ್ಚೆತ್ತುಕೊಂಡ ಸರ್ಕಾರ ಇತ್ತೀಚೆಗೆ ಅರ್ಜಿಗಳ ಪರಿಶೀಲನೆ ನಡೆಸಿ ಹೊಸ ಪಡಿತರ ಚೀಟಿ ವಿತರಣೆ ಆರಂಭಿಸಿತ್ತು. ತಾಲ್ಲೂಕಿನಲ್ಲಿ ಸಲ್ಲಿಸಿದ್ದ ಎಲ್ಲ ಅರ್ಜಿಗಳನ್ನು ಅಧಿಕಾರಿಗಳು ವಿಲೇವಾರಿ ಮಾಡಿದ್ದಾರೆ.

ತಾಲ್ಲೂಕಿನಲ್ಲಿ ಹೊಸ ಪಡಿತರ ಚೀಟಿಗಾಗಿ 817 ಅರ್ಜಿ ಸಲ್ಲಿಕೆಯಾಗಿದ್ದವು. ಸರ್ಕಾರದ ನಿಯಮಗಳ ಅನ್ವಯ ಅರ್ಜಿಗಳ ಪರಿಶೀಲನೆ ಆರಂಭಿಸಲಾಗಿತ್ತು. ಪ್ರತಿಯೊಂದು ಅರ್ಜಿಯ ಬಗ್ಗೆ ಕೂಲಂಕುಶವಾಗಿ ಪರಿಶೀಲನೆ ನಡೆಸಿದ್ದ ಅಧಿಕಾರಿಗಳು ನಿಯಮಗಳಂತೆ ಅರ್ಹರಾದವರಿಗೆ ಹೊಸ ಪಡಿತರ ಚೀಟಿ ವಿತರಿಸಿದ್ದಾರೆ.

2025ರ ಡಿಸೆಂಬರ್ನಿಂದ ಮಾರ್ಚ್ 2026 ರವರೆಗೆ ಅರ್ಹತೆ ಹೊಂದಿದ್ದ 610 ಫಲಾನುಭವಿಗಳಿಗೆ ಹೊಸ ಬಿಪಿಎಲ್ ಪಡಿತರ ಚೀಟಿ ವಿತರಿಸಲಾಗಿದೆ. ಉಳಿದ 207 ಅರ್ಜಿಗಳನ್ನು ವಿವಿಧ ಕಾರಣಗಳನ್ನು ನೀಡಿ ತಿರಸ್ಕರಿಸಲಾಗಿದೆ.

ವಿಳಾಸ ತಪ್ಪಾಗಿರುವುದು, ಸೂಕ್ತ ದಾಖಲೆ ಸಲ್ಲಿಸದಿರುವುದು ಮತ್ತಿತರ ಕಾರಣಗಳಿಂದ 207 ಅರ್ಜಿ ತಿರಸ್ಕೃತಗೊಂಡಿವೆ. ಆದರೆ ಅವರೆಲ್ಲ ಅನರ್ಹರು ಎಂದು ಹೇಳಲಾಗುವುದಿಲ್ಲ. ಸೂಕ್ತ ದಾಖಲೆಗಳನ್ನು ಸಿದ್ಧಪಡಿಸಿ ಅವಕಾಶ ನೀಡಿದಾಗ ಪುನ: ಅರ್ಜಿ ಸಲ್ಲಿಸಬಹುದು ಎಂದು ಆಹಾರ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.

607 ಎಪಿಎಲ್ಗೆ ವರ್ಗಾವಣೆ: ಬಿಪಿಎಲ್ ಪಡಿತರ ಚೀಟಿಗಳನ್ನು ಹೊಂದಿರುವ ಅನರ್ಹರ ಪತ್ತೆಗಾಗಿ ನಿರಂತರವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಸದಾ ಪರಿಷ್ಕರಣೆ ನಡೆಯುತ್ತಿರುತ್ತದೆ. ತಾಲ್ಲೂಕಿನಲ್ಲಿ 607 ಮಂದಿಯ ಬಿಪಿಎಲ್ ಪಡಿತರ ಚೀಟಿಗಳನ್ನು ಎಪಿಎಲ್ಗೆ ವರ್ಗಾವಣೆ ಮಾಡಲಾಗಿದೆ ಎಂದು ಆಹಾರ ಇಲಾಖೆ ಶಿರಸ್ತೇದಾರ್ ನಟರಾಜ್ ತಿಳಿಸಿದರು.

2023- 24ರಲ್ಲಿ ಸಲ್ಲಿಸಿದ್ದ ಅರ್ಜಿಗಳನ್ನು 2026ರಲ್ಲಿ ವಿಲೇವಾರಿ ಮಾಡಿ ಹೊಸ ಪಡಿತರ ಚೀಟಿ ವಿತರಿಸಲಾಗಿದೆ. ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಲು ಸರ್ಕಾರ ಯಾವಾಗ ಅವಕಾಶ ನೀಡುತ್ತದೆ ಎಂದು ಜನರು ಕಾಯುತ್ತಿದ್ದಾರೆ. ಕೆಲವು ಕುಟುಂಬಗಳು ವಿಭಜನೆಯಾಗಿವೆ. ಕೆಲವರು ಮದುವೆಯಾಗಿ ಪ್ರತ್ಯೇಕ ಸಂಸಾರ ನಡೆಸುತ್ತಿದ್ದಾರೆ. ಈಗಿರುವ ಪಡಿತರ ಚೀಟಿಗಳಲ್ಲೂ ಸಾಕಷ್ಟು ಹೆಸರು ಬದಲಾವಣೆ ಆಗಬೇಕು. ಸರ್ಕಾರ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು ಎಂಬುದು ಜನರ ಒತ್ತಾಯ.

ಪ್ರಸ್ತುತ ಅಂತ್ಯೋದಯ ಪಡಿತರ ಚೀಟಿಗಳಿಗೆ 21 ಕೆ.ಜಿ ರಾಗಿ, 14 ಕೆ.ಜಿ ಅಕ್ಕಿ ನೀಡಲಾಗುತ್ತಿದೆ. ಬಿಪಿಎಲ್ ಪಡಿತರ ಚೀಟಿದಾರರಿಗೆ 1 ಯುನಿಟ್ಗೆ 6 ಕೆ.ಜಿ ರಾಗಿ, 4 ಕೆ.ಜಿ ಅಕ್ಕಿ ಸೇರಿ ಒಬ್ಬರಿಗೆ 10 ಕೆ.ಜಿ ಉಚಿತವಾಗಿ ನೀಡಲಾಗುತ್ತಿದೆ. ಮೇ ಮತ್ತು ಜೂನ್ ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ಇದೇ ತಿಂಗಳಲ್ಲಿ ವಿತರಿಸಲಾಗುತ್ತದೆ ಎಂದು ಶಿರಸ್ತೇದಾರ್ ನಟರಾಜ್ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-16-1787053931

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.