ಚಿಂತಾಮಣಿ: ತಾಲ್ಲೂಕಿನ ವೈಜಕೂರು ಗೇಟ್ ಬಳಿ ಶುಕ್ರವಾರ ಬೈಕ್ಗೆ ಕಾರು ಡಿಕ್ಕಿ ಹೊಡೆದು ಬೈಕ್ನಲ್ಲಿದ್ದ ತಂದೆ, ಮಗ ಗಾಯಗೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದ ಅಕ್ರಂಪಾಷಾ ಮತ್ತು ಅವರ ಮಗ ಮಹ್ಮದ್ ಹಿಜರ್ ಗಾಯಾಳುಗಳು.

ಅಕ್ರಂಪಾಷಾಗೆ ತಲೆ, ಮುಖ, ಕೈ ಮತ್ತು ಕಾಲುಗಳಿಗೆ ತೀವ್ರ ಗಾಯಗಳಾಗಿವೆ. ಮಹ್ಮದ್ ಹಿಜರ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ತಂದೆ, ಮಗ ಬೈಕ್ನಲ್ಲಿ ಸೂಲಿಬೆಲೆಯಿಂದ ಚಿಂತಾಮಣಿಗೆ ಬರುತ್ತಿದ್ದರು. ವೈಜಕೂರು ಗೇಟ್ ಸಮೀಪದ ಬಾರ್ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ.

ಡಿಕ್ಕಿಯ ರಭಸಕ್ಕೆ ಇಬ್ಬರೂ ದ್ವಿಚಕ್ರ ವಾಹನ ಸಮೇತ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ವಾಹನ ಸಹ ಜಖಂಗೊಂಡಿದೆ. ಸ್ಥಳೀಯರು ಕೂಡಲೇ ವಾಹನದಲ್ಲಿ ಚಿಂತಾಮಣಿ ಸರ್ಕಾರಿ ಅಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಥಮ ಚಿಕಿತ್ಸೆ ನೀಡಿದ ವೈದ್ಯರು ತೀವ್ರವಾಗಿ ಗಾಯಗೊಂಡಿದ್ದ ಅಕ್ರಂಪಾಷಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರದ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಅಕ್ರಂಪಾಷಾ ಸಂಬಂಧಿಕ ಬಾಬಾ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಅಪಘಾತವೆಸಗಿ ಪರಾರಿಯಾಗಿರುವ ಕಾರು ಮತ್ತು ಅದರ ಚಾಲಕನ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-16-417369654

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.